ಅಕ್ರಮ ಮದ್ಯ ಮಾರಾಟಕ್ಕೆ ಎಸ್‍ಸಿ-ಎಸ್‍ಟಿ ಯುವಕರೇ ಹೆಚ್ಚು ಬಲಿ; ವಿಧಾನಸಭೆಯಲ್ಲಿ ಗಂಭೀರ ಚರ್ಚೆ

Date:

Advertisements

ಗ್ರಾಮೀಣ ಪ್ರದೇಶಗಳಲ್ಲಿ ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ವಿಚಾರ ವಿಧಾನಸಭೆ ಅಧಿವೇಶನದಲ್ಲಿ ಮಂಗಳವಾರ ಪ್ರತಿಧ್ವನಿಸಿ, ಪಕ್ಷಬೇಧ ಮರೆತು ಗಂಭೀರ ಚರ್ಚೆಗೆ ದಾರಿಮಾಡಿಕೊಟ್ಟಿತು.

ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಮಾತನಾಡುತ್ತ, “ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿದೆ. ಸರ್ಕಾರ ಅಕ್ರಮ ಮದ್ಯ ಮಾರಾಟ ತೆಡಲು ಆಗದಿದ್ದರೆ ಇದನ್ನು ಅಧಿಕೃತಗೊಳಿಸಿಬಿಡಿ. ಎಸ್‍ಸಿ/ಎಸ್‍ಟಿ ಕಾಲೋನಿಗಳಲ್ಲಿ ಹೆಚ್ಚು ಮದ್ಯವ್ಯಸನಿಗಳಾಗುತ್ತಿದ್ದಾರೆ. 35 ವಯಸ್ಸಿನೊಳಗೆ ಯುವಕರು ಸಾಯುತ್ತಿದ್ದಾರೆ. ಇದನ್ನು ತಡೆಯಲು ಕಾನೂನು ರೀತಿ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದಕ್ಕೆ ಆಕ್ಷೇಪವೆತ್ತಿದ ಆಡಳಿತ ಪಕ್ಷದ ಶಾಸಕ ನಾರಾಯಣಸ್ವಾಮಿ, “ಕೇವಲ ಎಸ್‍ಸಿ/ಎಸ್‍ಟಿಯವರು ಮಾತ್ರ ಕುಡಿಯುತ್ತಾರಾ? ನೀವು ಕುಡಿಯುವುದಿಲ್ಲವೇ? ದೇವರ ಮೇಲೆ ಆಣೆ ಮಾಡಿ ಹೇಳಿ? ಎಂದು ಛೇಡಿಸಿದರು.

Advertisements

ವಿರೋಧಪಕ್ಷದ ಶಾಸಕರು ಧ್ವನಿ ಏರಿಸಿದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ರಾಜ್ಯಪಾಲರ ಭಾಷಣ ಸಂದರ್ಭದಲ್ಲಿ ಹೆಚ್ಚು ಪ್ರಸ್ತಾಪ ಮಾಡಬಹುದು. ಅರಗ ಜ್ಞಾನೇಂದ್ರ ಗೃಹಸಚಿವರಾಗಿದ್ದರು. ಅವರ ಕಾಲದಲ್ಲಿ ಎಷ್ಟು ಅಕ್ರಮ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಿಸಿದ್ದಾರೆ ಹೇಳಲಿ? ಸೂಕ್ತ ಸಲಹೆ ನೀಡಲಿ” ಎಂದು ತಿರುಗೇಟು ನೀಡಿದರು.

ಶಾಸಕ ಕೌಜಲಗಿ ಮಹಂತೇಶ್ ಶಿವಾನಂದ್ ಅವರ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಪ್ರತಿಪಕ್ಷಗಳ ಸದಸ್ಯರು ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಂತೆ ಆಗ್ರಹಿಸಿದರು.

“ಗ್ರಾಮೀಣ ಪ್ರದೇಶಗಳಲ್ಲಿ ಕೆಲವು ವ್ಯಕ್ತಿಗಳು ಸ್ವ ಲಾಭಕ್ಕಾಗಿ ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವ ಪ್ರಕರಣಗಳು ಗಮನಕ್ಕೆ ಬಂದಿವೆ. ನಿಯಂತ್ರಣ ಮಾಡುವ ಕೆಲಸವನ್ನು ಇಲಾಖೆಯಿಂದ ಮಾಡುತ್ತಿದ್ದೇವೆ. ಕಾನೂನು ಉಲ್ಲಂಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ” ಸಚಿವ ಆರ್‌ ಬಿ ತಿಮ್ಮಾಪುರ ಉತ್ತರಿಸಿದರು.

“ಅಕ್ರಮ ಮದ್ಯ ಮಾರಾಟದಿಂದ ವಿದ್ಯಾರ್ಥಿಗಳು ಮದ್ಯವ್ಯಸನಿಗಳಾಗುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಂತಹ ಕೃತ್ಯದಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಲಾಖೆಯಿಂದ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ” ಎಂದು ಸಚಿವರು ಹೇಳಿದರು.

“ಅಕ್ರಮ ಮದ್ಯ ಮಾರಾಟ ತಡೆಯಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ಮಾರ್ಗಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಂದರ್ಭದಲ್ಲಿ ಮಹಿಳೆಯರು, ಮಹಿಳಾ ಸಂಘಗಳು ಸಾರ್ವಜನಿಕರಿಂದ ದೂರು ಸ್ವೀಕೃತವಾದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ ಅಕ್ರಮ ಕಂಡುಬಂದಲ್ಲಿ ಅಬಕಾರಿ ನಿಯಮಗಳ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ” ಎಂದು ಹೇಳಿದರು.

18,253 ಆರೋಪಿತರ ದಸ್ತಗಿರಿ

“2024-25ನೇ ಅಬಕಾರಿ ಸಾಲಿನಲ್ಲಿ ಜನವರಿ ಅಂತ್ಯದವರೆಗೂ 17,390 ಮೊಕದ್ದಮೆಗಳನ್ನು ದಾಖಲಿಸಿ 18,253 ಆರೋಪಿತರನ್ನು ದಸ್ತಗಿರಿಗೆ ಒಳಪಡಿಸಲಾಗಿದೆ. ಮಾಸಿಕವಾಗಿ ಎಲ್ಲ ಮದ್ಯ ಮಾರಾಟ ಸನ್ನದ್ದುಗಳನ್ನು ನಿಯಮಿತವಾಗಿ ಪರಿಶೀಲಿಸಿ ಷರತ್ತು ಉಲ್ಲಂಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆ ನಡೆಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಮಾರಾಟ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮದ್ಯವ್ಯಸನ ಮತ್ತು ಮಾರಾಟದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ” ಎಂದು ಸಚಿವರು ಮಾಹಿತಿ ನೀಡಿದರು.

ಸಚಿವರ ಉತ್ತರಕ್ಕೆ ತೃಪ್ತರಾಗದ ಪ್ರತಿಪಕ್ಷಗಳ ಶಾಸಕರು, ಅಕ್ರಮ ಮದ್ಯ ಮಾರಾಟ ತಡೆಯಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‍ಬಾಬು ಮಾತನಾಡಿ, “ಪ್ರತಿ ಮದ್ಯ ಮಾರಾಟದ ಅಂಗಡಿಗೆ ಗುರಿ ನಿಗದಿಪಡಿಸಿರುವುದರಿಂದ ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡುವಂತಾಗಿದೆ” ಎಂದರು.

ಬಿಜೆಪಿ ಶಾಸಕ ಸುನೀಲ್‍ಕುಮಾರ್ ಮಾತನಾಡಿ, “ಸರ್ಕಾರ ಗುರಿ ನಿಗದಿಪಡಿಸಿರುವುದರಿಂದ ಅಕ್ರಮ ಮಾರಾಟಕ್ಕೆ ದಾರಿ ಮಾಡಿಕೊಟ್ಟಂತಾಗಿದೆ” ಎಂದು ಆರೋಪಿಸಿದರು. ಬಿಜೆಪಿಯ ಮತ್ತೊಬ್ಬ ಶಾಸಕ ಸಿದ್ದು ಸವದಿ ಮಾತನಾಡಿ, “ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಮಾಹಿತಿ ಅಬಕಾರಿ ಇನ್ಸ್‍ಪೆಕ್ಟರ್‍ಗಳಿಗೆ ಇರುತ್ತವೆ. ಇಂತಹ ಕಾರ್ಯಕ್ಕೆ ಉತ್ತೇಜನ ನೀಡುವ ಅಧಿಕಾರಿಯನ್ನು ಅಮಾನತು ಮಾಡಿ” ಎಂದು ಆಗ್ರಹಿಸಿದರು.

ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌, “ಎಲ್ಲೆಲ್ಲಿ ಮದ್ಯ ಅಕ್ರಮವಾಗಿ ಮಾರಾಟವಾಗುತ್ತದೆ ಎಂಬ ಮಾಹಿತಿ ಶಾಸಕರಿಗೆ ಇರುತ್ತದೆ. ಅದರ ಪಟ್ಟಿ ಕೊಟ್ಟು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿ, ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಅಧಿಕಾರಿಯ ಮೇಲೆ ಕ್ರಮ ಜರುಗಿಸಿ” ಎಂದು ಸಲಹೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X