ಕೊಪ್ಪಳ ಸಮೀಪದಲ್ಲಿ ಬಿಎಸ್‌ಪಿಎಲ್ ಕೈಗಾರಿಕೆ ಸ್ಥಾಪನೆಯ ಎಲ್ಲ ಸಿದ್ಧತೆಗಳನ್ನು ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಡಿಸಿ ಅವರಿಗೆ ಸೂಚನೆ ನೀಡಿದ್ದಾರೆ.
ಕೊಪ್ಪಳ ಸಮೀಪದಲ್ಲಿ ಬಿಎಸ್‌ಪಿಎಲ್ ಕೈಗಾರಿಕಾ ಸ್ಥಾಪನೆ ಮಾಡಿದಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರು ಸಚಿವರನ್ನು ಒಳಗೊಂಡಂತೆ ಸರ್ವ ಪಕ್ಷಗಳ ನಿಯೋಗವು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಹಿನ್ನೆಲೆಯಲ್ಲಿ ಸಿಎಂ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿ ಬಲ್ಲೊಟ್ಟ ಕಂಪನಿಯ ಹೊಸ ಕೈಗಾರಿಕೆ ಸ್ಥಾಪನೆಯ ಸಿದ್ಧತೆಯನ್ನು ತಕ್ಷಣ ನಿಲ್ಲಿಸುವಂತೆ ಸ್ಥಳದಲ್ಲಿಯೇ ನಿರ್ದೇಶನ ನೀಡಿದ್ದಾರೆ. ಸಿದ್ಧತೆ ಬಂದು ಮಾಡಿದ ವರದಿಯನ್ನು ತಮಗೆ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ಅಲ್ಲದೆ ಸರ್ಕಾರದ ವತಿಯಿಂದ ಕೈಗಾರಿಕೆ ಸ್ಥಾಪನೆಯ ತಡೆಯುವ ಕುರಿತಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿಯೂ ಸರ್ವ ಪಕ್ಷಗಳ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದಾರೆ.
ಸರ್ವಪಕ್ಷಗಳ ನಿಯೋಗದಲ್ಲಿ ಜಿಲ್ಲಾ ಉಸ್ತುವಾರಿ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ, ರಾಘವೇಂದ್ರ ಹಿಟ್ನಾಳ್, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ, ಎಂಎಲ್ಸಿ ಹೇಮಲತಾ ನಾಯಕ್, ಬಸನಗೌಡ ಬಾದರ್ಲಿ,ಮಾಜಿ ಸಚಿವ ಅಮರೇಗೌಡ ಬಯ್ಯಾಪೂರ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಶಿವರಾಮೇಗೌಡ, ಮಾಜಿ ಶಾಸಕ ಕೆ ಶರಣಪ್ಪ, ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ, ಮಾಜಿ ಶಾಸಕರಾದ ಪರಣ್ಣ ಮನವಳ್ಳಿ, ಹಸನಸಾಬ ದೋಟಿಹಾಳ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ್ ವೀರೇಶ್ ಮಹಾಂತಯ್ಯನಮಠ, ಡಾ. ಬಸವರಾಜ ಕ್ಯಾವಟರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಏನಿದು ವಿವಾದ?
ಕಳೆದ ಕೆಲ ತಿಂಗಳ ಹಿಂದೆ ಕೊಪ್ಪಳ ಸಮೀಪದಲ್ಲಿ ಬಿಎಸ್‌ಪಿಎಲ್ ಬೃಹತ್ ಉಕ್ಕು ಕೈಗಾರಿಕಾ ಘಟಕ ಈ ಹಿಂದೆ ಸರ್ಕಾರವೇ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಡಂಬಡಿಕೆಗೆ ಒಪ್ಪಿಗೆ ನೀಡಿತ್ತು. ಇದು ಜಿಲ್ಲೆಯ ಜನರಲ್ಲಿ ಭಾರಿಯ ಸಮಾಧಾನವನ್ನು ತರಿಸಿತು.
ಕೊಪ್ಪಳದಲ್ಲಿ ಕೈಗಾರಿಕೆ ಸ್ಥಾಪನೆ ವಿರೋಧಿಸಿ ಹೋರಾಟಗಳು ನಡೆದಿದ್ದವು. ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿಯೇ ಹೋರಾಟ ಬಹುದೊಡ್ಡ ಸ್ವರೂಪವನ್ನು ಪಡೆದುಕೊಂಡಿತ್ತು. ಕೈಗಾರಿಕೆ ಸ್ಥಾಪನೆ ರದ್ದತಿ ಆದೇಶದ ಪ್ರತಿಯೊಂದಿಗೆ ಜಿಲ್ಲೆಗೆ ಆಗಮಿಸುವಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು.