ಉಡುಪಿ | ಜಿಲ್ಲೆಯಲ್ಲಿ ವ್ಯಾಪಕ ಉದ್ಯೋಗವಕಾಶಗಳನ್ನು ಸೃಷ್ಟಿಸುವ ಮಹತ್ವಕಾಂಕ್ಷಿ – ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ

Date:

Advertisements

ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅತ್ಯಂತ ವೇಗವಾಗಿ ಪ್ರಗತಿ ಹೊಂದುತ್ತಾ ಇದ್ದು ಪ್ರತಿ ವರ್ಷ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿ ಉನ್ನತ ಹುದ್ದೆಗಳ ಆಕಾಂಕ್ಷೆಯೊಂದಿಗೆ ದೇಶ ವಿದೇಶಗಳಿಗೆ ತೆರಳುತ್ತಿದ್ದಾರೆ. ಅಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಹಾಗೂ ಅಂತಹ ಅಭ್ಯರ್ಥಿಗಳನ್ನು ಜಿಲ್ಲೆಯಲ್ಲಿಯೇ ಉಳಿಸಿಕೊಳ್ಳುವ ಮಹತ್ವಕಾಂಕ್ಷೆಯೊಂದಿಗೆ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿಯವರು ಹೇಳಿದರು.

ಅವರು ಮಂಗಳವಾರ ಉಡುಪಿ ಬನ್ನಂಜೆ ನಾರಾಯಣ ಗುರು ಸಭಾಂಗಣದಲ್ಲಿ ಉಡುಪಿ ನಗರಸಭೆ, ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಬಿಲ್ಲಾಡಿ ಇವರ ಪ್ರಾಯೋಜಕತ್ವದಲ್ಲಿ ಮತ್ತು ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್, ಬಿಲ್ಲವ ಸೇವಾ ಸಂಘ ಬನ್ನಂಜೆ ಇವರ ಸಹಕಾರದಲ್ಲಿ ಉನ್ನತಿ(2.0)- 2025 ಎನ್ನುವ ಪರಿಕಲ್ಪನೆಯಲ್ಲಿ ಆಯೋಜಿಸಿದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿ, ಉದ್ಘಾಟಿಸಿ ಮಾತನಾಡಿದರು.

1004602143

ಉದ್ಯೋಗ ಮೇಳದಲ್ಲಿ ಸುಮಾರು 60 ಕಂಪನಿಗಳು ಹಾಗೂ ಎರಡು ಸಾವಿರಕ್ಕೂ ಮಿಕ್ಕಿ ಉದ್ಯೋಗಕಾಂಕ್ಷಿಗಳು ಭಾಗವಹಿಸಿ, 70% ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ನಿಯುಕ್ತಿ ಹೊಂದಿದರು.

Advertisements

ಆತ್ಮಾನಂದ ಸಂಸ್ಥೆಯ ಪ್ರಾಚಾರ್ಯರಾದ ರೂಪೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆಯ ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸುಂದರ್ ಜಿ ಕಲ್ಮಾಡಿ, ಮಾಜಿ ಅಧ್ಯಕ್ಷರಾದ ಕಿರಣ್ ಕುಮಾರ್, ಸ್ಥಳೀಯ ನಗರಸಭಾ ಸದಸ್ಯೆ ಸವಿತಾ ಹರೀಶರಾಮ್, ಮೇಳದ ಸಂಯೋಜಕರುಗಳಾದ ಓಬ ಪೂಜಾರಿ, ಪ್ರಮೋದ್ ಕರ್ಕೇರಾ, ನಿವೃತ್ತ ಪ್ರಾಂಶುಪಾಲ ಡಾ.ಗಣನಾಥ ಎಕ್ಕಾರು, ಭಾಸ್ಕರ್ ಸುವರ್ಣ, ಉಡುಪಿಯ ಉದ್ಯಮಿ ದಿನೇಶ್ ಅಮೀನ್, ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಮಾಧವ ಬನ್ನಂಜೆ, ನಗರಸಭೆಯ ಅಧಿಕಾರಿಗಳಾದ ನಾರಾಯಣ್ ಎಸ್ ಎಸ್, ಮನೋಹರ್, ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X