ಉಡುಪಿ | ಜನಸಾಮಾನ್ಯರೊಂದಿಗೆ ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸಿ – ಜಿ.ಪ ಸಿ.ಇ.ಓ ಪ್ರತೀಕ್ ಬಾಯಲ್

Date:

Advertisements

ಜನಸಾಮಾನ್ಯರು ತಮ್ಮ ದೈನಂದಿನ ವ್ಯವಹಾರಗಳಿಗೆ ಬ್ಯಾಂಕುಗಳಿಗೆ ಬಂದಾಗ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ, ಅವರುಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಪೂರಕ ವಾತಾವರಣ ಕಲ್ಪಿಸಿದಾಗ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬ್ಯಾಂಕುಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗದರ್ಶನದ ಅನ್ವಯ ಠೇವಣಿ ಒಟ್ಟು ಮೊತ್ತದ ಶೇ. 60 ರಷ್ಟು ಸಾಲ ವಿತರಣೆ ಮಾಡುವುದರೊಂದಿಗೆ ಸಿ.ಡಿ ಅನುಪಾತವನ್ನು ಹೆಚ್ಚುವಂತೆ ಎಲ್ಲಾ ಬ್ಯಾಂಕ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಕೆಲವು ಬ್ಯಾಂಕ್‌ಗಳಲ್ಲಿ ಸಿ.ಡಿ. ಅನುಪಾತವು ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಸುಧಾರಣೆ ಆಗಬೇಕು ಎಂದರು.

Advertisements
1004603276

ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳನ್ನು ನಿರ್ಮಿಸಲು ಹಾಗೂ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಠಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 131 ಫಲಾನುಭವಿಗಳಿಗೆ, 40.15 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದ ಅವರು, ಪಿ.ಎಂ.ಇ.ಜಿ.ಪಿ ಯೋಜನೆಯಡಿ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ, ಅರ್ಹ ಫಲಾನುಭವಿ ಉದ್ಯಮಿಗಳಿಗೆ ಸಬ್ಸಿಡಿಯನ್ನು ಶೀಘ್ರವಾಗಿ ವಿತರಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೃಷಿ ವಲಯಕ್ಕೆ 4439 ನಿಗಧಿತ ಗುರಿಗೆ 3003 ಗುರಿ ಸಾಧಿಸಿ ಶೇ. 67.25, ಎಂ.ಎಸ್.ಎಂ.ಇ ವಲಯಕ್ಕೆ 3425 ಗುರಿ ನಿಗಧಿಪಡಿಸಲಾಗಿದ್ದು, 2495 ಗುರಿ ಸಾಧಿಸಿ ಶೇ. 72.85 ರಷ್ಟು, ಶಿಕ್ಷಣ ವಲಯಕ್ಕೆ 139 ನಿಗಧಿತ ಗುರಿಗೆ 113 ಸಾಧನೆ ಮಾಡಿ ಶೇ. 81.15 ರಷ್ಟು, ವಸತಿ ಕ್ಷೇತ್ರಗಳಿಗೆ 369 ನಿಗಧಿತ ಗುರಿಗೆ 197 ಗುರಿ ಸಾಧಿಸಿ ಶೇ. 53.33 ರಷ್ಟು ಹಾಗೂ ಇತರೆ ವಲಯಗಳಿಗೆ 422 ನಿಗಧಿತ ಗುರಿಗೆ, 281 ಗುರಿ ಸಾಧಿಸಿ ಶೇ. 66.66 ಸಾಧನೆ ಮಾಡಲಾಗಿದೆ ಎಂದರು.

ಪಿ.ಎಂ.ಎಫ್.ಎಂ.ಇ ಯೋಜನೆಯಡಿ ನಿಗಧಿತ ಗುರಿಗೆ ಹೆಚ್ಚು ಅರ್ಜಿಗಳು ಸ್ವೀಕೃತವಾಗದೇ ಇರುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ಸಿ.ಇ.ಓ ರವರು, ಈ ಯೋಜನೆಯ ಬಗ್ಗೆ ಜನಸಾಮಾನ್ಯರಿಗೆ ಹೆಚ್ಚು ಅರಿವು ಮೂಡಿಸಿ, ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ವಹಿಸಬೇಕು. ಯೋಜನೆಯಡಿ ಅರ್ಜಿ ಸ್ವೀಕೃತವಾದಾಗ ಅರ್ಜಿಗಳು ತಿರಸ್ಕೃತವಾಗದಂತೆ ನೋಡಿಕೊಳ್ಳಬೇಕು. ಸಾಲ ನೀಡುವಾಗ ಯಾವುದೇ ಕುಂದು ಕೊರತೆಗಳು ಎದುರಾದಲ್ಲಿ ಅದನ್ನು ಸರಿಪಡಿಸಿ, ನಿಗಧಿತ ಗುರಿ ಸಾಧನೆಗೆ ಮುಂದಾಗಬೇಕು ಎಂದ ಅವರು, ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರವೇ ಕ್ರಮವಹಿಸಬೇಕು ಎಂದರು.

ಕೆನರಾ ಬ್ಯಾಂಕ್‌ನ ರೀಜನಲ್ ಮ್ಯಾನೆಜರ್ ಶೀಬ ಸಹಜನ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿAಗ್ ಠೇವಣಿ ಅನುಪಾತವು ಶೇ.48.41 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.48.47 ರಷ್ಟಾಗಿ ಶೇ. 0.06 ರಷ್ಟು ಏರಿಕೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ಅತ್ಯಂತ ಕಳವಳಕಾರಿಯಾದ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಸಿ.ಡಿ ಅನುಪಾತ ಹೆಚ್ಚಿಸಲು ಎಲ್ಲಾ ಬ್ಯಾಂರ‍್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಆರ್.ಬಿ.ಐ ನ ಎಕ್ಸಿಕ್ಯುಟಿವ್ ಇಳಾ ಸಾಹು, ಮಂಗಳೂರು ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ರಾಜೇಶ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X