ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಬಾಲ್ಯವಿವಾಹ ನಡೆಯುವುದನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಡೆದಿದ್ದಾರೆ.
ಎಸ್ಎಸ್‌ಎಲ್‌ಸಿ ಓದುತ್ತಿರುವ ಬಾಲಕಿಯ ವಿವಾಹ ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರ ಯುವಕನೊಂದಿಗೆ ಮಾರ್ಚ್ 7ರಂದು ನಿಗದಿಯಾಗಿತ್ತು. ಈ ಕುರಿತು ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ಬಂದ ನಂತರ ತಹಸೀಲ್ದಾರ್ ಶಿವಾನಂದ ಮೇತ್ರೆ ನೇತ್ರತ್ವದಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮ ಬಗ್ಗೆ ಮನವರಿಕೆ ಮಾಡಿದ್ದಾರೆ.
ʼಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸಿ 18 ವರ್ಷ ತುಂಬುವುವರೆಗೆ ಮದುವೆ ಮಾಡಬಾರದೆಂದು ಎಚ್ಚರಿಕೆ ನೀಡಲಾಯಿತು. ಪಾಲಕರುಗಳಿಂದ ಮುಚ್ಚಳಿಕೆ ಪತ್ರ ಪಡೆದುಕೊಳ್ಳಲಾಗಿದೆ. ಒಂದು ವೇಳೆ 18 ವರ್ಷದ ಒಳಗೆ ಮದುವೆ ಮಾಡಿದರೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸುವುದಾಗಿ ಸೂಚನೆ ನೀಡಲಾಗಿದೆ’ ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ಮಾಹಿತಿ ನೀಡಿದರು.
ಮಕ್ಕಳ ರಕ್ಷಣಾ ತಂಡದಿಂದ ವಿನೋದ ಕುರೆ, ತಾಲ್ಲೂಕು ಪಂಚಾಯಿತಿ ಇಒ ವೈಜಣ್ಣ ಫುಲೆ, ಅಂಗನವಾಡಿ ಮೇಲ್ವಿಚಾರಕಿ ಕೌಸರ ಬಾನು, ಶ್ರೀದೇವಿ, ಜ್ಯೋತಿ ಹಿರೇಮಠ, ಕಂದಾಯ ನಿರೀಕ್ಷಕ ಶರಣು ಪಾವಡಶೆಟ್ಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಹಾರುದ್ರಪ್ಪಾ, ಹುಲಸೂರ ಠಾಣೆಯ ಬಿಟ್ ಪೋಲಿಸ್ ಶರ್ಫೋದ್ಧೀನ್ ನೇತೃತ್ವದಲ್ಲಿ ಭೇಟಿ ನೀಡಿ ಮನವೊಲಿಸಿದರು.
ಮಾಸಿಕ ₹4000 ನೀಡಲು ಸೂಚನೆ :
ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ನಡೆಯಬೇಕಿದ್ದ ಬಾಲಕಿಯ ವಿವಾಹವನ್ನು ತಾಲ್ಲೂಕ ಮಟ್ಟದ ಅಧಿಕಾರಿಗಳಿಂದ ಮಂಗಳವಾರ ತಡೆ ಹಿಡಿದಿದ್ದು, ಅಧಿಕಾರಿಗಳ ಕಾರ್ಯಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಶ್ಲಾಘಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಆನ್‌ಲೈನ್ ಗೇಮ್ಸ್ | ತಂದೆ-ತಾಯಿ, ಸಹೋದರಿಯನ್ನು ಕೊಂದ 21 ವರ್ಷದ ಯುವಕ
ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಅಧಿಕಾರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸದರಿ ಮಗುವಿಗೆ ಮುಂದಿನ ಶೈಕ್ಷಣಿಕ ಸಹಾಯಕ್ಕಾಗಿ ಮಾಸಿಕ ₹4 ಸಾವಿರ ಮೂರು ವರ್ಷಗಳ ಕಾಲ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ