ಅರಣ್ಯ ಇಲಾಖೆಯ ಎಡವಟ್ಟಿನಿಂದ ಆಕಸ್ಮಿಕ ಅಗ್ನಿ ಅವಘಡಕ್ಕೆ ಚಿರತೆಯೊಂದು ಬಲಿಯಾದ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಗ್ರಾಮದ ಸ.ನಂ. 10ರಲ್ಲಿ ನಾರಾಯಣಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನ್ ಇಡಲಾಗಿತ್ತು. ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೇನೋ ಸೆರೆಯಾಗಿದೆ. ಆದರೆ ಈ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೋನಿನಲ್ಲಿದ್ದ ಚಿರತೆ ಉಸಿರುಗಟ್ಟಿ ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿದೆ.
ಇನ್ನು ಚಿರತೆ ಸೆರೆಗೆಂದೇ ಬೋನ್ ಅಳವಡಿಸಿ, ಬಳಿಕ ಚಿರತೆ ಬೋನಿಗೆ ಸೆರೆಯಾಯಿತೇ ಇಲ್ಲವೇ ಎನ್ನುವುದನ್ನು ಮರೆತ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಬೇಜವಾಬ್ದಾರಿ ನಡೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಿಪಟೂರು | ಪಿ.ಎಂ. ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ಕೇಂದ್ರ ಸಚಿವ ವಿ. ಸೋಮಣ್ಣ
ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಚಿರತೆ ಕಳೇಬರ ವಿಲೇವಾರಿ ಮಾಡಲಾಗಿದೆ.
