ಪ್ರಗತಿ ಪಥ ಯೋಜನೆಯಡಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಪಿಎಂಜಿಎಸ್‌ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಿಧಾನಸಭೆಯಲ್ಲಿ ಸದಸ್ಯ ಎನ್.ಎಚ್.ಕೋನರೆಡ್ಡಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಪ್ರಗತಿಪಥ ಯೋಜನೆಯ ಅಡಿ 7110 ಕಿ.ಮೀ ಉದ್ದದ ಗ್ರಾಮೀಣ ರಸ್ತೆಗಳನ್ನು ರೂ.5190 ಕೋಟಿಗಳನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದ್ದು, ಪ್ರಗತಿಪಥ ಯೋಜನೆಗೆ ಕೇಂದ್ರ ಸರಕಾರದ ಹಣಕಾಸು ಸಚಿವಾಲಯ ಇತೀಚೆಗೆ ಅನುಮೋದನೆ ನೀಡಿದೆ” ಎಂದರು.

“ಪ್ರಗತಿಪಥ ಯೋಜನೆಯ ಶೀಘ್ರ ಅನುಷ್ಠಾನದ ದೃಷ್ಟಿಯಿಂದ ಗ್ರಾಮಪಥ ತಂತ್ರಾಂಶದಲ್ಲಿ ಅರ್ಹ ರಸ್ತೆಗಳ ಆಯ್ಕೆ ಪ್ರಕ್ರಿಯೆ ಹಂತದಲ್ಲಿರುತ್ತದೆ. ನಮ್ಮ ಹೊಲ ನಮ್ಮ ರಸ್ತೆ ಯೋಜನೆ ಜಾರಿಯಲ್ಲಿರುವುದಿಲ್ಲ. ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ಗ್ರಾಪಂ ಒಟ್ಟು ವೆಚ್ಚದ ಶೇ.10ರ ಮಿತಿಯೊಳಗೆ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಆದೇಶವನ್ನು ಹೊರಡಿಸಲಾಗಿದೆ” ಎಂದು ಹೇಳಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X