ಚರಂಡಿ ನೀರು ಹರಿದುಹೋಗುವ ವಿಚಾರದಲ್ಲಿ ಎರಡು ಕುಟುಂಬದ ನಡುವೆ ಹೊಡೆದಾಟ ನಡೆದಿದ್ದು, ಗಲಾಟೆಯಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತಿಪಟೂರು ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ. ವಸಂತಕುಮಾರ್ (24) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ಶಿವಬಸವಯ್ಯ ಮತ್ತು ಬಸವಲಿಂಗಯ್ಯರ ಕುಟುಂಬದ ನಡುವೆ ನಡೆದ ಗಲಾಟೆ ನಡೆದಿತ್ತು. ಬಸವಲಿಂಗಯ್ಯ ಕುಟುಂಬ ಶಿವಬಸವಯ್ಯ ಅವರ ಕುಟುಂಬದ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ಘಟನೆಯಲ್ಲಿ ಶಿವಬಸವಯ್ಯರ ಪುತ್ರ ವಸಂತಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಅವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಹಲ್ಲೆ ಆರೋಪ; ಶಿಕ್ಷಕಿ ವಿರುದ್ಧ ಎಫ್‌ಐಆರ್
ಘಟನೆ ಸಂಬಂಧ ಬಸವಲಿಂಗಯ್ಯ, ಕುಮಾರ್, ವಿಜಯ್ ಸೇರಿದಂತೆ ಒಟ್ಟು 8 ಜನರ ವಿರುದ್ದ ದೂರು ದಾಖಲಾಗಿದೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಲು ಮುಂದಾಗಿದ್ದಾರೆ.