ರಾಯಚೂರು | ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಇಂದಿನಿಂದ ರೀಗಲ್-25 ವಾರ್ಷಿಕೋತ್ಸವ

Date:

Advertisements

ರಾಯಚೂರು ನಗರದ ನವೋದಯ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ನವೋದಯ ಶಿಕ್ಷಣ ಸಂಸ್ಥೆ‌‌ ರೀಗಲ್-25 ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಿದೆ ಎಂದು ನವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಸ್ ಆರ್ ರೆಡ್ಡಿ ಹೇಳಿದರು.

ಈ ಕುರಿತು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದು ಸಂಜೆ ಸಂಜೆ 6.30 ಕ್ಕೆ ಕರ್ನಾಟಕ ವೈದ್ಯಕೀಯ ಮಂಡಳಿಯ ಅಧ್ಯಕ್ಷ ಡಾ. ವೈ ಸಿ ಯೋಗಾನಂದ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾ.7ರ ಬೆಳಿಗ್ಗೆ 10ಕ್ಕೆ ವೈದ್ಯಕೀಯ, ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಮುಂಬೈನ ಲೀಲಾವತಿ ಖೇರ್ ಹಿಂದುಜಾ ಹಾಲಿ ಫ್ಯಾಮಿಲಿ ಮತ್ತು ಬ್ರಾಂಚ್ ಕ್ಯಾಂಡಿ ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ. ಆನಂದ ಎಂ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ” ಎಂದರು.

“ಮಾ. 8ರ ಬೆಳಿಗ್ಗೆ 10.45ಕ್ಕೆ ನವೋದಯ ಸಭಾಂಗಣದಲ್ಲಿ ಫಿಸಿಯೋಥೆರಪಿ, ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಶಿಕ್ಷಣ ಪದವೀಧರರಿಗೆ ಭಾರತೀಯ ನರ್ಸಿಂಗ್ ಕೌನ್ಸಿಲ್ ಅಧ್ಯಕ್ಷ ಡಾ. ಟಿ ದಿಲೀಪ್ ಕುಮಾರ ಪದವಿ ಪ್ರದಾನ ಮಾಡಲಿದ್ದಾರೆ.
ಸಂಜೆ 6.30ಕ್ಕೆ ಯೂಫೋರಿಯಾ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ರಾಯಚೂರು ಜಿ.ಪಂ. ಸಿಇಒ ರಾಹುಲ್ ಪಾಂಡ್ವೆ ಕಾರ್ಯಕ್ರಮ ಉದ್ಘಾಟಿಸುವರು. ಒಟ್ಟು 320 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ. ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ” ಎಂದು ತಿಳಿಸಿದರು.

Advertisements

ಎಂಜಿನಿಯರಿಂಗ್ ಕಾಲೇಜಿಗೆ ಯುಜಿಸಿ ಅನುಮೋದನೆ: “ಪ್ರಥಮ ಬಾರಿಗೆ ನವೋದಯ ಎಂಜಿನಿಯರಿಂಗ್ ಕಾಲೇಜಿಗೆ ಯುಜಿಸಿಯಿಂದ ಸ್ವಾಯತ್ತ ಸಂಸ್ಥೆಯೆಂದು ಅನುಮೋದನೆ ದೊರೆತಿದೆ. ನವೋಯದ ಆಸ್ಪತ್ರೆಯಲ್ಲಿ 12 ತುರ್ತು ನಿಗಾ ಘಟಕಗಳನ್ನು ₹3.5 ಕೋಟಿ ವೆಚ್ಚದಲ್ಲಿ ನವೀಕರಣಗೊಳಿಸಲಾಗಿದೆ. ಎನ್‌ಬಿಎಚ್ ಸ್ಟಾಂಡರ್ಡ್‌ನಲ್ಲಿ ನಿರ್ಮಿಸಲಾಗಿದೆ. ಸ್ಪೋಟ ಆಕಾಡೆಮಿ ನಿರ್ಮಾಣ ಕಾರ್ಯಪ್ರಗತಿಯಲ್ಲಿದ್ದು, ಜೂನ್ ಅಂತ್ಯಕ್ಕೆ ಪ್ರಾರಂಭವಾಗಲಿದೆ. ನವೋದಯದ ಸಂಸ್ಥೆಯಿಂದಲೇ ಶಿಕ್ಷಣ ಮತ್ತು ಆರೋಗ್ಯ ವಿಷಯಗಳ ಕುರಿತು 10 ಕಿಮೀ ವ್ಯಾಪ್ತಿಯಲ್ಲಿ ವಿಷಯಗಳನ್ನು ಪ್ರಚಾರಪಡಿಸಲು ನವೋದಯ ಎಫ್‌ಎಫ್ ರೇಡಿಯೋ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮತಿ ಪಡೆಯಲಾಗಿದೆ” ಎಂದು ಹೇಳಿದರು.

ಎಸ್.ಆರ್.ರೆಡ್ಡಿ ಫೌಂಡೇಷನ್‌ನಿಂದ 20 ಬಿಎಸ್‌ಸಿ ಮತ್ತು 20 ಜಿಎನ್ಎಂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವಿಗೆ ವಿದ್ಯಾರ್ಥಿ ವೇತನ, ಉಚಿತ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ ವರ್ಷದಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣ ನೀಡಲು ಅಲೊಚಿಸಲಾಗಿದೆ. 6656 ವಿದ್ಯಾರ್ಥಿಗಳು ಸಂಸ್ಥೆಯ ವಿವಿಧ ಕೋರ್ಸ್‌ಗಳ ಶಿಕ್ಷಣ ಪಡೆಯುತ್ತಿದ್ದಾರೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಣಮಟ್ಟ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಿಸ್ಕೋ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ₹3 ಕೋಟಿ ವೆಚ್ಚದಲ್ಲಿ ಆರ್ಟಿಫಿಶಲ್ ಇಂಟಿಲಿಜೆನ್ಸ್ ತಂತ್ರಾಂಶದಡಿ ಶಿಕ್ಷಣ ನೀಡಲು ಸೆಂಟರ್ ಫಾರ್ ಎಕ್ಸಲೆನ್ಸಿ ಕೇಂದ್ರ ಸ್ಥಾಪಿಸಲಾಗುವುದು ಇದಕ್ಕೆ ₹3 ಕೋಟಿ ವೆಚ್ಚವಾಗಲಿದೆ. ನವೋದಯ ಶಿಕ್ಷಣ ಸಂಸ್ಥೆಯ ಎಲ್ಲ ವಿಭಾಗದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ತರಬೇತಿಗೆ ಆದ್ಯತೆ ನೀಡಿದ್ದು, ಅನೇಕರು ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಅನೇಕರು ಉತ್ತಮ ಸಾಧನೆ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

“ತಾಲೂಕಿನ ಕಲ್ಮಲಾ, ಬಿಜನಗೇರ, ಇಡಪನೂರು, ಚಂದ್ರಬಂಡಾ‌ ಸೇರಿದಂತೆ ಸುತ್ತ ಮುತ್ತಲಿನ‌ ಗ್ರಾಮಗಳಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇಂದಿಗೂ ಅನೇಕ ಹಳ್ಳಿಗಳಲ್ಲಿ ಗರ್ಭಿಣಿಯರು ಮನೆಗಳಲ್ಲಿಯೇ ಹೆರಿಗೆ ಮಾಡಿಸಿಕೊಳ್ಳುತ್ತಿದ್ದು‌ ತಾಯಿ-ಶಿಶುಮರಣ ತಡೆಗಟ್ಟಲು ನವೋದಯ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡವರಿಗೆ ತಾಯಿ ಮಡಿಲು ಕಿಟ್ ನೀಡುತ್ತಿದ್ದೇವೆ‌ ಹಾಗೂ ₹3 ಸಾವಿರ ಸಹಾಯಧನ ನೀಡುತ್ತಿದ್ದೇವೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ರಿಜಿಸ್ಟ್ರಾರ್ ಡಾ. ಶ್ರೀನಿವಾಸ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X