ಬೀದರ್ | ಸರ್ಕಾರಿ ಸೌಲಭ್ಯ ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಿರಿ: ಸುಭಾಷ್ ನಾಗುರೆ

Date:

Advertisements

ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುಭಾಷ್ ನಾಗುರೆ ಸಲಹೆ ನೀಡಿದರು.

ಬೀದರ್ ನಗರದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ಯೂನಿಟಿ ಮೂವ್ಮೆಂಟ್ ಆಶ್ರಯದಲ್ಲಿ ಆಯೋಜಿಸಿದ್ದ ‘ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿಧ್ಯಾರ್ಥಿಗಳಿಗೆ ಸಿಗುವ ಶೈಕ್ಷಣಿಕ ಸೌಲಭ್ಯಗಳ ಕುರಿತು ವಿಚಾರ ಸಂಕಿರಣ’ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ದಲಿತ ಯೂನಿಟಿ ಮೂವ್ಮೆಂಟ್ ಸಂಸ್ಥಾಪಕ ವಿನೋದ್ ರತ್ನಾಕರ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಶಿಕ್ಷಣ ಪಡೆಯಲು ಯಾವುದೇ ಅವಕಾಶ ಇರಲಿಲ್ಲ. ಆದರೆ, ಇಂದು ಎಲ್ಲ ಅವಕಾಶಗಳಿದ್ದರೂ ಬಹುತೇಕ ಜನರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ಇಲ್ಲ. ಸಮಾಜ ಕಲ್ಯಾಣ ಇಲಾಖೆ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಸವಲತ್ತು ಕುರಿತು ಮಾಹಿತಿ ನೀಡುವುದು ಶ್ಲಾಘನೀಯ ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಹಂಪಿಯಲ್ಲಿ ಜಿ20 ಶೃಂಗಸಭೆ; ರಾಜ್ಯದ ಬೊಕ್ಕಸಕ್ಕೆ 47 ಕೋಟಿ ರೂ. ಹೊರೆ

ಎಸ್.ಸಿ, ಎಸ್.ಟಿ ಸಮುದಾಯ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ಈ ಜನಾಂಗದ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಿಸಲು ಕಷ್ಟವಾಗುತ್ತದೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆ ಸೌಲಭ್ಯಗಳು ಹಾಗೂ ವಸತಿ ನಿಲಯಗಳ ಪ್ರಯೋಜನ ಪಡೆದು ಒಳ್ಳೆಯ ಶಿಕ್ಷಣ ಪಡೆಯಬೇಕು. ಎಷ್ಟೇ ಕಠಿಣ ಸಮಸ್ಯೆಗಳಿದ್ದರೂ ಶಿಕ್ಷಣದಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದಲಿತ ಯೂನಿಟಿ ಮೂವ್ಮೆಂಟ್ ಸಂಘಟನೆ ಪದಾಧಿಕಾರಿಗಳಾದ ಮಹಾಂತೇಶ್, ಉಮೇಶ್ ವಾಘರಾಜ್, ಆನಂದ್, ಓಂಕಾರ್, ನಿಲಕಂಠ, ವಿಕಾಸ್‌ ಸೇರಿದಂತೆ ವಸತಿ ನಿಲಯದ ಮೇಲ್ವಿಚಾರಕ ಗೌತಮ್, ಯಲ್ಲಪಾ, ಹಾಗೂ ವಿದ್ಯಾರ್ಥಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X