ಮಂಗಳೂರು | ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ; ಪಾಲಿಕೆ, ಜಿಲ್ಲಾಡಳಿತಕ್ಕಿಲ್ಲ ಕಾಳಜಿ!

Date:

Advertisements

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾಮಂಜೂರು ಸಮೀಪದ ಪಚ್ಚನಾಡಿಯ ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ ಉಲ್ಬಣವಾಗುತ್ತಿದ್ದು, ಉಸಿರಾಟಕ್ಕೂ ಕಷ್ಟಪಡುತ್ತಿದ್ದಾರೆ. ಆದರೆ ಮಂಗಳೂರು ಪಾಲಿಕೆ, ಜಿಲ್ಲಾಡಳಿತಕ್ಕೆ ವಿದ್ಯಾರ್ಥಿಗಳ ಕುರಿತು ಯಾವುದೇ ಕಾಳಜಿ ಇಲ್ಲ ಎಂದು ಎನ್‌ಎಸ್‌ಯುಐ ಮಂಗಳೂರು ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ಆರೋಪಿಸಿದರು.

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದು, ಕಾಲೇಜುಗಳು ಇರುವ ಜಾಗದಲ್ಲಿ ಕಸ ವಿಲೇವಾರಿ‌ ಘಟಕ ನಿರ್ಮಾಣವಾಗಿದ್ದು, ಇದರಿಂದ ಬರುವ ದುರ್ನಾತದಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಉಸಿರಾಟಕ್ಕೂ ಕಷ್ಟಪಡುತ್ತಿದ್ದಾರೆ. ಆದರೂ ಮಹಾನಗರ ಪಾಲಿಕೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ” ಎಂದು ಕಳವಳ ವ್ಯಕ್ತಪಡಿಸಿದರು.

“ಬುದ್ದಿವಂತರ ನಾಡು, ಶಿಕ್ಷಿತರ ಜಿಲ್ಲೆ ಎಂದು ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡದ ಮಂಗಳೂರು ನಗರದಲ್ಲಿ ಹಲವಾರು ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳು ಹಾಗೂ ಕಾಲೇಜುಗಳಿವೆ. ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳೂ ಮಂಗಳೂರಿನಲ್ಲಿದ್ದಾರೆ. ಈ ವಿದ್ಯಾರ್ಥಿಗಳ ಜೀವನದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಸರ್ಕಾರ ಚೆಲ್ಲಾಟವಾಡುತ್ತಿದೆ. ಅಧಿಕಾರಿಗಳ ನಿರ್ಲ್ಯಕ್ಷ್ಯ ಹಾಗೂ ದುರಾಡಳಿತದಿಂದಾಗಿ ಯುವಜನಸಮೂಹ ಸಂಕಷ್ಟದಲ್ಲಿದೆ” ಎಂದು ಹೇಳಿದರು.

Advertisements

“ಮಂಗಳೂರು ನಗರವು ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿ. ಹಾಗಾಗಿ ಪ್ರತಿ ವರ್ಷ ದೇಶ ವಿದೇಶಗಳಿಂದ ಸಾವಿರಾರು ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸುತ್ತಾರೆ. ಆದರೆ ವಿದ್ಯಾರ್ಥಿಗಳ ಆರೋಗ್ಯದ ವಿಚಾರದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸರ್ಕಾರ ನಿರ್ಲಕ್ಷ್ಯ ತಾಳಿದೆ” ಎಂದು ಆರೋಪಿಸಿದರು.

“ಈ ಪ್ರದೇಶದ ಸುತ್ತಮುತ್ತ ಅನೇಕ ಶಾಲಾ ಕಾಲೇಜುಗಳಿವೆ. ಎಸ್‌ಡಿಎಂ ಮಂಗಳಜ್ಯೋತಿ ಐಟಿಐ ಕಾಲೇಜು, ಎಸ್‌ಡಿಎಂ ಮಂಗಳಜ್ಯೋತಿ ಇಂಟಿಗ್ರೇಟೆಡ್ ಸ್ಕೂಲ್, ಕರಾವಳಿ ಕಾಲೇಜ್ ಆಫ್ ಫಾರ್ಮಸಿ, ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು, ಸೇಂಟ್ ರೇಮಂಡ್ಸ್ ಶಾಲೆ, ಸೇಂಟ್ ರೇಮಂಡ್ಸ್ ಪಿಯು ಕಾಲೇಜು, ಸೇಂಟ್ ರೇಮಂಡ್ಸ್ ಕಾಲೇಜು ಸಹಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನು ವಿದ್ಯಾರ್ಥಿ ಸಮೂಹ ನೆಚ್ಚಿಕೊಂಡಿದೆ. ಆದರೆ, ಈ ವಿದ್ಯಾರ್ಥಿಗಳು ನಿತ್ಯ 8 ಗಂಟೆಗೂ ಹೆಚ್ಚು ಹೊತ್ತು ತರಗತಿಯಲ್ಲಿ ಕುಳಿತು ಕಸ ವಿಲೇವಾರಿ ಘಟಕದ ದುರ್ವಾಸನೆಯಿಂದ ಪರಿತಪಿಸುವಂತಾಗಿದೆ. ಹಾನಿಕಾರಕ ಅನಿಲಗಳು, ಮೈಕ್ರೋ ಪ್ಲಾಸ್ಟಿಕ್ ಮತ್ತು ಧೂಳು ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೊಡೆತ ನೀಡುತ್ತಿದೆ” ಎಂದರು.

“ಅನೇಕ ವಿದ್ಯಾರ್ಥಿಗಳು ಉಸಿರಾಟದ ತೊಂದರೆ ಹಾಗೂ ಬಗೆಬಗೆಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ‌. ವಿದ್ಯಾರ್ಥಿಗಳಲ್ಲಿ ಎದೆ ನೋವು ಮತ್ತು ಇತರ ಹಲವಾರು ಸಮಸ್ಯೆಗಳು ಕಂಡುಬರುತ್ತಿವೆ. ಇದೀಗ ಕಳೆದ ಕೆಲವು ದಿನಗಳಲ್ಲಿ ಹಲವರು ಕಾಯಿಲೆ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಕಲುಷಿತ ವಾತಾವರಣವೇ ಕಾರಣ ಎಂಬುದು ವೈದ್ಯರ ಹೇಳಿಕೆ. ಆದರೆ ಅಧಿಕಾರಿಗಳು ಮಾತ್ರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವುದು ನಾಡಿನ ದೌರ್ಬಾಗ್ಯವಲ್ಲದೆ ಬೇರೇನೂ ಅಲ್ಲ” ಎಂದರು.

“ಈ ಕಸವಿಲೇವಾರಿ ಘಟಕವನ್ನು ಜನವಸತಿ ಪ್ರದೇಶದಿಂದ ನಗರದ ಹೊರಭಾಗಕ್ಜೆ ಸ್ಥಳಾಂತರಿಸುವಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತ ವಿಫಲವಾಗಿದೆ. ಅದರಿಂದಾಗಿಯೇ ಈ ಪ್ರದೇಶದ ನಿವಾಸಿಗಳು ನರಕಯಾತನೆ ಅನುಭವಿಸುವಂತಾಗಿದೆ. ಇದೀಗ ಹವಾಮಾನದ ವೈಪರೀತ್ಯದಿಂದಾಗಿ ಬಿಸಿಲಿನ ಝಳ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ ಹೊತ್ತಿಕೊಳ್ಳುವ ಸಂಭವವೂ ಇದೆ. ಹಾನಿಕಾರಕ ರಾಸಾಯನಿಕ ಅನಿಲಗಳ ಈ ಹೊರಸೂಸುವಿಕೆಯು ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಬಲ್ಲದು. ಅದರಲ್ಲೂ ಸಮೀಪದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ” ಎಂದು ಹೇಳಿದರು.

“ಬೇಸಿಗೆಯಲ್ಲಿ ಮಾತ್ರವಲ್ಲ, ಮಳೆ ಬಂದಾಗಲೂ ಅವಾಂತರ ಸೃಷ್ಟಿಯಾಗುತ್ತದೆ. ತ್ಯಾಜ್ಯ ಮತ್ತು ಕಸದ ಕೊಳಕು ವಾಸನೆ ಅಸಹನೀಯವಾಗಿದೆ. ಈ ಸಮಸ್ಯೆಯಿಂದಾಗಿ ಅಂತರ್ಜಲವೂ ಕೆಟ್ಟುಹೋಗುತ್ತಿದೆ. ಸುತ್ತಮುತ್ತ ಕುಡಿಯಲು ಯೋಗ್ಯ ನೀರು ಸಿಗದ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಈ ದುಃಸ್ಥಿತಿಯಿಂದ ಬೇಸತ್ತಿರುವ ಸಾರ್ವಜನಿಕರು ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.‌ ಉಸಿರಾಟಕ್ಕೂ ಕಷ್ಟಪಡುತ್ತಿರುವ ವಿದ್ಯಾರ್ಥಿಗಳ ಬದುಕಿನ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆಯೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರಾಣಿ,ಪಕ್ಷಿ ಸಂಕುಲ ಉಳಿಸಿ : ನಟ ಪ್ರಜ್ವಲ್ ದೇವರಾಜ್

“ಇದು ಜನರ ಮೂಲಭೂತ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಮತ್ತು ಜನರ ಬಗ್ಗೆ ನಿಜವಾಗಿಯೂ ಸರ್ಕಾರಕ್ಕೆ ಕಾಳಜಿ ಇದ್ದರೆ, ಒಂದು ಸಮಿತಿಯನ್ನು ರಚಿಸಿ, ಕಸ ವಿಲೇವಾರಿ ಘಟಕವನ್ನು ನಗರದಿಂದ ಕನಿಷ್ಟ 5 ಕಿಮೀ ಹೊರಗೆ ಸ್ಥಳಾಂತರಿಸಲಿ. ಯಾವುದೇ ಶಿಕ್ಷಣ ಸಂಸ್ಥೆ ಇಲ್ಲದ ಮತ್ತು ವಸತಿ ಇಲ್ಲದ ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ.

“ಪ್ರಸ್ತುತ ಪರಿಸ್ಥಿತಿ ಬಗ್ಗೆ ವಿದ್ಯಾರ್ಥಿ ಸಂಘಟನೆಗಳೂ ಆಕ್ರೋಶ ವ್ಯಕ್ತಪಡಿಸಿವೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ಸಂಘದ ಮುಖಂಡರು, ರಾಜಕಾರಣಿಗಳು ತಮ್ಮ ಚುನಾವಣೆ ನಂತರ ಮರೆತುಬಿಡುತ್ತಾರೆ. ಆದರೆ ವಿದ್ಯಾರ್ಥಿ ಶಕ್ತಿಯು ನ್ಯಾಯಕ್ಕಾಗಿ ಹೋರಾಡುವ ಸಾಮರ್ಥ್ಯವನ್ನು ಮತ್ತು ಸರ್ಕಾರ ಚುನಾಯಿತ ಪ್ರತಿನಿಧಿಗಳನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ತಿಳಿದುಕೊಳ್ಳಲಿ” ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X