ರಾಜ್ಯದ 2025-26ನೇ ಸಾಲಿನ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂ.ಗಳದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬೆಂಗಳೂರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಟನಲ್ ಯೋಜನೆಗೆ ₹40ಸಾವಿರ ಕೋಟಿ ಘೋಷಣೆ
- ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕನಸಿನ ಯೋಜನೆಯಾದ ಟನಲ್ ಯೋಜನೆಗೆ ₹40ಸಾವಿರ ಕೋಟಿ ರೂ.ಅನುದಾನವನ್ನು ಸಿಎಂ ಘೋಷಿಸಿದ್ದಾರೆ.