ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ತಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.
ಬೆಂಗಳೂರಿನ ಗುರಪ್ಪನಪಾಳ್ಯದ ವರ್ಷದ ಅಬ್ದುಲ್ ವಹಿದ್ (60) ಹಾಗೂ ಅವರ ಮಗ ಸಕ್ಲೇನ್ (26) ಮೃತ ದುರ್ದೈವಿಗಳು.
ಕಾರಿನಲ್ಲಿದ್ದ ಸರ್ದಾರ್ ಎಂಬುವವರ ಸ್ಥಿತಿ ಗಂಭೀರವಾಗಿದೆ. ನಗೀನಾ, ಅಮ್ರಿನ್, ಸುಯೇಬ್ ಸೇರಿದಂತೆ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.
ನಿನ್ನೆ ಮುರುಗಮಲ್ಲ ದರ್ಗಾಗೆ ಹೋಗಿ ವಾಪಸ್ಸು ಬರುವಾಗ ಚಿಂತಾಮಣಿ ಬಳಿ ಅಪಘಾತ ಸಂಭವಿಸಿದೆ.

ಅಪಘಾತವಾಗಿ ಒಂದು ಗಂಟೆ ಕಳೆದರೂ ಸ್ಥಳಕ್ಕೆ ಆಂಬುಲೆನ್ಸ್ ಬಾರದೆ ಇದ್ದರಿಂದ ಸ್ಥಳದಲ್ಲಿದ್ದ ಎಎಸ್ಐ ಚಂದ್ರಪ್ಪ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರದಿದ್ದಾರೆ.
ಇದನ್ನೂ ಓದಿ: ಚಿಂತಾಮಣಿ | ಕುರಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್
ಇನ್ನು ವಿಷಯ ತಿಳಿದ ಕೂಡಲೇ ಅಪರ ಜಿಲ್ಲಾ ರಕ್ಷಣಾಧಿಕಾರಿ ರಾಜಾ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳಿಧರ್, ಚಿಂತಾಮಣಿ ಗ್ರಾಮಾಂತರ ಠಾಣೆಯ ಸಿಐ ಶಿವರಾಜ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
