ರಾಜ್ಯ ಬಜೆಟ್ | ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಸಿಎಂ ಕೊಟ್ಟಿದ್ದೇನು?

Date:

Advertisements

2024-25ನೇ ಸಾಲಿನ ಬಜೆಟ್‌ನಲ್ಲಿ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ತಕ್ಕಂತೆ ಅಗತ್ಯ ಶೈಕ್ಷಣಿಕ ವಾತಾವರಣ ಸೃಷ್ಠಿಸಲು ನಾನಾ ಯೋಜನೆಗಳನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರಲ್ಲಿಯೂ ಹೆಣ್ಣು ಮಕ್ಕಳು ಹೆಚ್ಚಾಗಿ ಉನ್ನತ ಶಿಕ್ಷಣ ಪಡೆಯುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದೂ ಹೇಳಿದ್ದಾರೆ.

ಉನ್ನತ ಶಿಕ್ಷಣ ಕ್ಷೇತ್ರಕ್ಕೆ ದೊರೆತ ಯೋಜನೆಗಳೇನು?

  • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ.
  • ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ 2,500 ಕೋಟಿ ರೂ. ವೆಚ್ಚ.
  • ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ. ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿ.
  • ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 26 ಕಾಲೇಜುಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ 26 ಕೋಟಿ ರೂ. ವೆಚ್ಚ.
  • ರಾಜ್ಯದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಒಟ್ಟಾರೆ 275 ಕೋಟಿ ರೂ. ವೆಚ್ಚ.
  • ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳ ಪೂರೈಕೆ.
  • ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗಾಗಿ – ಇಂಗ್ಲೆಂಡ್‌ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ.
  • ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 30 ಕೋಟಿ ರೂ. ವೆಚ್ಚ.
  • ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆ – 150 ಕೋಟಿ ರೂ. ವೆಚ್ಚ.
  • ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆ.
  • KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ – 10 ಕೋಟಿ ರೂ. ವೆಚ್ಚ.
  • ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠ ಸ್ಥಾಪನೆ.

ವೈದ್ಯಕೀಯ ಶಿಕ್ಷಣಕ್ಕೆ ದೊರೆತದ್ದು ಏನು?

Advertisements
  • ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸಲು – i) 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಮತ್ತು 34 ಕೋಟಿ ರೂ. ವೆಚ್ಚದಲ್ಲಿ 64 ಅನಸ್ತೇಷಿಯಾ ವರ್ಕ್‌ ಸ್ಟೇಷನ್‌ಗಳ ಸ್ಥಾಪನೆ. ii) ಗದಗ ಮೆಡಿಕಲ್‌ ಕಾಲೇಜಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ Cath lab ಸೌಲಭ್ಯದೊಂದಿಗೆ Super Speciality Cardiac Unit ಸ್ಥಾಪನೆ. iii) ಕಲಬುರಗಿಯಲ್ಲಿ 92 ಕೋಟಿ ರೂ. ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು 304 ಕೋಟಿ ರೂ. ವೆಚ್ಚದ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆ. iv) 26 ಕೋಟಿ ರೂ. ವೆಚ್ಚದ ಬೆಂಗಳೂರಿನ ನೆಫ್ರೊ-ಯುರಾಲಾಜಿ ಸಂಸ್ಥೆಯ ಕಟ್ಟಡವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು.
  • ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಅಡಿಯಲ್ಲಿ ಬಾಗಲಕೋಟೆಯಲ್ಲಿ ಘಟಕ ವೈದ್ಯಕೀಯ ಕಾಲೇಜು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜು ಸ್ಥಾಪನೆ.
  • ಬೀದರ್‌ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಪತ್ತೆ ವಿಭಾಗ ಸ್ಥಾಪನೆ.
  • ಬೆಂಗಳೂರಿನ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಾಮಗಾರಿ 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸುವುದು.
  • ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್‌ ಹೆಲ್ತ್‌ ಸೈನ್ಸ್‌ ಕೋರ್ಸ್‌ ಆರಂಭ
  • ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್‌ ಕೇಂದ್ರಗಳ ಸ್ಥಾಪನೆ.
  • ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ (Endocrinology) ಕೇಂದ್ರಗಳ ಆರಂಭ.
  • ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ.
  • ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ.
  • ರಾಯಚೂರಿನ ರಾಜೀವ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ.
  • ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ ಆರು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನರ್ಸಿಂಗ್‌ ಕಾಲೇಜುಗಳನ್ನು KKRDB ಅನುದಾನದಲ್ಲಿ ಸ್ಥಾಪನೆ.

      ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

      ಪೋಸ್ಟ್ ಹಂಚಿಕೊಳ್ಳಿ:

      LEAVE A REPLY

      Please enter your comment!
      Please enter your name here

      ಪೋಸ್ಟ್ ಹಂಚಿಕೊಳ್ಳಿ:

      ಈ ಹೊತ್ತಿನ ಪ್ರಮುಖ ಸುದ್ದಿ

      ವಿಡಿಯೋ

      ಇದೇ ರೀತಿಯ ಇನ್ನಷ್ಟು ಲೇಖನಗಳು
      Related

      ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

      ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

      ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

      ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

      ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

      ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

      ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

      ""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

      Download Eedina App Android / iOS

      X