ಉಡುಪಿ | ಮೊಬೈಲ್ ವಿಚಾರಕ್ಕೆ ಬೈದ ತಾಯಿ, ಆತ್ಮಹತ್ಯೆಗೆ ಶರಣಾದ ಮಗಳು

Date:

Advertisements

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕೋಟ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬ್ರಹ್ಮಾವರ ತಾಲೂಕು ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್‌ ಮೊಗವೀರ ಅವರ ಪುತ್ರಿ ದಿಶಾ(16) ಆತ್ಮಹತ್ಯೆಗೆ ಶರಣಾದವಳು. ದಿಶಾ ಮೊಬೈಲ್ ನೋಡಿಕೊಂಡು ಕುಳಿತಿದ್ದ ಹಿನ್ನೆಲೆಯಲ್ಲಿ, ತಾಯಿ ಗದರಿಸಿ ಮೊಬೈಲ್‌ ತೆಗೆದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ದಿಶಾ ಕೋಣೆಯ ಬಾಗಿಲು ಹಾಕಿಕೊಂಡಿದ್ದಾಳೆ, ತಾಯಿ ಬಾಗಿಲು ತೆರೆಯಲು ಹೇಳಿದರೂ ಬಾಗಿಲು ತೆರೆಯದೆ ಇರುವುದನ್ನು ಕಂಡು ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

ಮನೆಯ ಕಿಟಕಿಯ ಕಂಬಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಸ್ಥಳೀಯರು ಬಂದು ಬಾಲಕಿಯನ್ನು ರಕ್ಷಸಿದ್ದಾರೆ. ಆಸ್ಪತ್ರೆಗೆ ಬಾಲಕಿಯನ್ನು ಕರೆದೊಯ್ದು ರಕ್ಷಣೆಗೆ ಪ್ರಯತ್ನಿಸಲಾಗಿದ್ದು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ.

Advertisements

ದಿಶಾ ಸ್ಥಳೀಯ ಕೋಟ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಸ್ಥಳಕ್ಕೆ ಕೋಟ ಪೊಲೀಸ್‌ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X