ಶುಶ್ರೂಷಾಧಿಕಾರಿಗಳಿಗೆ ಮೂಲ ವೇತನ ನೀಡಿದಿದ್ದರೆ, ಗಾಂಧಿ ಅವರ ‘ದಂಡಿ ಸತ್ಯಾಗ್ರಹ’ ಸ್ಮರಣಾ ದಿನದಂದೇ (ಮಾರ್ಚ್ 12) ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ರಾಧಾಸುರೇಶ್ ಪಿ.ಎನ್ ಎಚ್ಚರಿಕೆ ನೀಡಿದ್ದಾರೆ.
ಮೂಲ ವೇತನ ಪಾವತಿಗೆ ಆಗ್ರಹಿಸಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಸಂಘದ ಸದಸ್ಯರು ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೆವು. ಆ ಸಮಯದಲ್ಲಿ ನಮ್ಮನ್ನು ಭೇಟಿ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶುಶ್ರೂಷಾಧಿಕಾರಿಗಳ ಬೇಡಿಕೆಗಳನ್ನು ಇತ್ಯರ್ಥಗೊಳಿಸಲು ಮಾರ್ಚ್ 10ರಂದು ಸಭೆ ಕರೆಯುವುದಾಗಿ ತಿಳಿಸಿದ್ದಾರೆ” ಎಂದು ವಿವರಿಸಿದ್ದಾರೆ.
“ಮಾರ್ಚ್ 10ರಂದು ನಡೆಯುವ ಸಭೆಯಲ್ಲಿ ಶುಶ್ರೂಷಾಧಿಕಾರಿಗಳ ‘ಮೂಲ ವೇತನ’ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹದ ದಿನವಾದ ಮಾರ್ಚ್ 12ರಂದು ಮುಖ್ಯಮಂತ್ರಿಗಳಿಗೆ ನಮ್ಮ ಸಾಮೂಹಿಕ ರಾಜಿನಾಮೆ ಸಲ್ಲಿಸುತ್ತೇವೆ. ಫ್ರೀಡಂಪಾರ್ಕ್‌ನಲ್ಲಿ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ” ಎಂದಿದ್ದಾರೆ.