ರಾಜ್ಯ ಬಜೆಟ್ | ಯುವಜನರಿಗೆ ಉದ್ಯೋಗ ಗ್ಯಾರಂಟಿ ನೀಡುವಲ್ಲಿ ವಿಫಲ: ಎಐಡಿವೈಒ ಕಿಡಿ

Date:

Advertisements

ರಾಜ್ಯದ44 ಇಲಾಖೆಗಳಲ್ಲಿ ಖಾಲಿ ಇರುವ 2.72 ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗ ನೇಮಕಾತಿ ಮಾಡುವ ಕುರಿತು ರಾಜ್ಯ ಬಜೆಟ್ ನಲ್ಲಿ ಯಾವುದೇ ಕ್ರಮಗಳಿಲ್ಲ. ಯುವಜನರಿಗೆ ಉದ್ಯೋಗದ ಭರವಸೆ ನೀಡಿಲ್ಲ. ಇದು ಯುವಜನ ವಿರೋಧಿ ಬಜೆಟ್‌ ಆಗಿದೆ ಎಂದು ಎಐಡಿವೈಒ ಅಸಮಾಧಾನ ವ್ಯಕ್ತಪಡಿಸಿದೆ.

2025-26ನೇ ಸಾಲಿನ ರಾಜ್ಯ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಅವರ ಮಂಡಿಸಿದ ಬಜೆಟ್‌ ಕುರಿತು ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ್ ಮತ್ತು ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಜೆಟ್‌ನಲ್ಲಿ ಯುವಜನರಿಗೆ ಯಾವುದೇ ಭರವಸೆಗಳಿಲ್ಲ ಎಂದು ಹೇಳಿದ್ದಾರೆ.

“ಉನ್ನತ ಶಿಕ್ಷಣದಲ್ಲಿ ಕೇವಲ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದನ್ನು ಹೊರತುಪಡಿಸಿ ಉಳಿದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಕುರಿತು ಯಾವುದೇ ಪ್ರಸ್ತಾಪವಿಲ್ಲ. ನರ್ಸಿಂಗ್ ಕಲಿತ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ನೀಡುವ ಬದಲು ಬಜೆಟ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದೇಶಿ ಭಾಷೆಗಳನ್ನು ಕಲಿಸಿ ವಿದೇಶದಲ್ಲಿ ಉದ್ಯೋಗ ಮಾಡಲು ಕಳಿಸುವ ಮೂಲಕ ಸರ್ಕಾರವೇ ಪ್ರತಿಭಾ ಪಲಾಯನಕ್ಕೆ ಎಡೆ ಮಾಡಿಕೊಡುತ್ತಿದೆ. ಸರ್ಕಾರದ ಈ ಧೋರಣೆ ಖಂಡಿನೀಯ” ಎಂದಿದ್ದಾರೆ.

Advertisements

“ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ, ಗೌರವಧನದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ೩ ಲಕ್ಷಕ್ಕೂ ಅಧಿಕ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಹಾಗೂ ಉದ್ಯೋಗ ಭದ್ರತೆ ಒದಗಿಸುವ ಬದಲು, ನಗದುರಹಿತ ಚಿಕಿತ್ಸಾ ಸೌಲಭ್ಯದ ಹೆಸರಿನಲ್ಲಿ ಅವರಿಂದಲೇ ವಂತಿಕೆ ಸಂಗ್ರಹ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಕುರಿತು ಸೂಕ್ತಕ್ರಮಗಳು ಈ ಬಜೆಟ್‌ನಲ್ಲಿಯೂ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವ್ಯಾಪಕವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಗೆ, ಗಿಗ್ ಕಾರ್ಮಿಕರ ಹಿತ ಕಾಪಾಡಲು ಕಾನೂನು ರೂಪಿಸುವುದಾಗಿ ಹೇಳಿದ್ದ ಸರ್ಕಾರ ಅದರ ಕುರಿತು ಈ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪವನ್ನು ಮಾಡದಿರುವುದು ಖಂಡನೀಯ. ಇತ್ತೀಚಿಗೆ ನಡೆದ ಇನ್ವೆಸ್ಟ್ ಕರ್ನಾಟಕ -2025ರ ಮೂಲಕ ಬಂಡವಾಳಗಾರರು ಲಕ್ಷಾಂತರ ಕೋಟಿ ರೂ. ಬಂಡವಾಳವನ್ನು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಮೂಲಕ ಮುಂದಿನ 5 ವರ್ಷಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಹಾಗೂ ಹೊಸ ಕೈಗಾರಿಕಾ ನೀತಿಯಿಂದ ಮುಂದಿನ 5 ವರ್ಷಗಳಲ್ಲಿ 20 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂದು ಆಶ್ವಾಸನೆಯ ಮಾತನ್ನಾಡಿ, ಬಂಡವಾಳಗಾರರಿಗೆ ವಿವಿಧ ಉತ್ತೇಜಕಗಳನ್ನು ನೀಡಲು ಹೊರಟಿರುವುದು ಸರ್ಕಾರ ಯಾರ ಪರವಾಗಿದೆ ಎಂಬುದನ್ನು ಸೂಚಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

“ನಿಜವಾಗಿಯೂ ಯಾರ ಪರವಾಗಿದೆ ಎನ್ನುವುದನ್ನು ತೋರಿಸುತ್ತದೆ. ಬಂಡವಾಳಶಾಹಿಗಳ ಉದ್ದೇಶ ಅತ್ಯಧಿಕ ಲಾಭವೇ ಹೊರತು ಉದ್ಯೋಗ ಸೃಷ್ಟಿ ಅವರ ಆದ್ಯತೆಯಲ್ಲ ಎನ್ನುವುದು ಜಗಜ್ಜಾಹೀರಾಗಿದೆ. ಈಗಾಗಲೇ ಮದ್ಯದ ಕುಡಿತದಿಂದಾಗಿ ಸಮಾಜದ ಸ್ವಾಸ್ಥ್ಯ ಹದಗೆಟ್ಟಿದೆ. ಬಹುದೊಡ್ಡ ಸಂಖ್ಯೆಯ ನಿರುದ್ಯೋಗಿ ಯುವಜನರೂ ಕುಡಿತಕ್ಕೆ ದಾಸರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರವು ಮದ್ಯ ಮಾರಾಟವನ್ನು ನಿಯಂತ್ರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲು ಬಜೆಟ್‌ನಲ್ಲಿ ಇದರಿಂದಲೇ ಅಬಕಾರಿ ಇಲಾಖೆಗೆ ಹೆಚ್ಚಿನ ಆದಾಯ ನಿರೀಕ್ಷಿಸುತ್ತಿರುವುದು ಖಂಡನೀಯ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

Download Eedina App Android / iOS

X