ಮುಸ್ಲಿಮರ ಓಟಿನ ಋಣ ತೀರಿಸಲು ಸಿಎಂ ಬಜೆಟ್‌ ಮಂಡಿಸಿದ್ದಾರೆ: ಆರ್‌. ಅಶೋಕ್‌ ಟೀಕೆ

Date:

Advertisements

ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.

ಬಜೆಟ್‌ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು ಮುಂದುವರಿಸಲಾಗಿದೆ. ಹಳೆ ಮೈಸೂರು ಅಥವಾ ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುಮತಿ ಬಳಿಕ ಮುಂದುವರಿಸುತ್ತೇವೆ ಎಂದು ತಿಳಿಸಲಾಗಿದೆ. ಇದನ್ನು ಓದಿ ಪುಟಗಳನ್ನು ವ್ಯರ್ಥ ಮಾಡಲಾಗಿದೆ” ಎಂದರು.

“ಕರ್ನಾಟಕದ ಇತಿಹಾಸದಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಅಂದರೆ 1,16,170 ಕೋಟಿ ರೂ. ಸಾಲ ಮಾಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾಖಲೆಯಾಗಿದೆ. ಒಟ್ಟು ಸಾಲದ ಪ್ರಮಾಣ 7,81,095 ಕೋಟಿ ರೂ. ಗೆ ಏರಿದೆ. ಅಬಕಾರಿ ಇಲಾಖೆಗೆ 60,000 ಕೋಟಿ ರೂ. ಗುರಿ ನೀಡಿ, ಹೊಸ ಬಾರ್‌ಗಳನ್ನು ಘೋಷಿಸಲಾಗಿದೆ. ಇದನ್ನು ಕಾಂಗ್ರೆಸ್‌ ಶಾಸಕರ ಬಾಯಿ ಮುಚ್ಚಿಸಲು ಮಾಡಲಾಗಿದೆ. ಇದರಿಂದ 40,000 ಕೋಟಿ ರೂ. ಆದಾಯ ಬರಲಿದೆ. ಅನ್ನಭಾಗ್ಯ ಹೋಗಿ ಕುಡುಕರ ಭಾಗ್ಯ ಬಂದಿದೆ. 4-5 ಸಾವಿರ ಕೋಟಿ ರೂ. ಆದಾಯ ಹೆಚ್ಚಿಸಲು ಈ ಕ್ರಮ ವಹಿಸಲಾಗಿದೆ” ಎಂದು ಹೇಳಿದರು.

Advertisements

“ಕಳೆದ ಬಜೆಟ್‌ನಲ್ಲೂ ಯಾವುದೇ ತೆರಿಗೆ ಘೋಷಣೆ ಮಾಡಿರಲಿಲ್ಲ. ಬಳಿಕ ತೆರಿಗೆಗಳನ್ನು ಹೆಚ್ಚಿಸಲಾಯಿತು. ಈ ಬಾರಿಯೂ ಬಜೆಟ್‌ ನಂತರ ತೆರಿಗೆ ಏರಿಕೆ ಮಾಡಲಾಗುತ್ತದೆ. ಬಸವರಾಜ ಬೊಮ್ಮಾಯಿ ಬಜೆಟ್‌ ಮಂಡನೆ ಮಾಡಿದಾಗ, ಅದು ಹೆಚ್ಚುವರಿಯಾಗಿತ್ತು. ಕಾಂಗ್ರೆಸ್‌ ಕೊರತೆ ಬಜೆಟ್‌ ಮಂಡಿಸಿದೆ. 193 ಪುಟಗಳಲ್ಲಿ ಹೊಸತನವೇ ಇಲ್ಲ” ಎಂದರು.

ಮುಸ್ಲಿಮರ ಬಜೆಟ್‌ ಇದು!

“ಇದು ಕೇವಲ ಮುಸ್ಲಿಮರ ಬಜೆಟ್‌. ಮುಸ್ಲಿಮರ ಜಟಕಾ ಗಾಡಿ ಏರಿಕೊಂಡು ಸಿದ್ದರಾಮಯ್ಯ ಪ್ರಯಾಣ ಮಾಡಿದ್ದಾರೆ. ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1,000 ಕೋಟಿ ರೂ. ನೀಡಲಾಗಿದೆ. ವಕ್ಫ್‌ ಬೋರ್ಡ್‌ ಮುಚ್ಚಿ ಎಂದರೆ, ಅದಕ್ಕೆ 150 ಕೋಟಿ ರೂ. ನೀಡಿದ್ದಾರೆ. ಮುಸ್ಲಿಮರ ವಿದೇಶ ಪ್ರಯಾಣಕ್ಕೆ 30 ಲಕ್ಷ ರೂ. ನೀಡಲಾಗುತ್ತದೆ. ಆದರೆ ಗುರುದ್ವಾರಗಳಿಗೆ ಕೇವಲ 2 ಕೋಟಿ ರೂ. ನೀಡಲಾಗಿದೆ. ಮುಸ್ಲಿಮರ ಓಟಿನ ಋಣ ತೀರಿಸಲು ಈ ಬಜೆಟ್‌ ನೀಡಲಾಗಿದೆ” ಎಂದು ದೂರಿದರು.

“ಎತ್ತಿನಹೊಳೆ ಪೂರ್ಣಗೊಳಿಸಲಾಗುವುದು ಎಂದಿದ್ದಾರೆ. ಆದರೆ ಹಣ ಎಷ್ಟು ನಿಗದಿ ಮಾಡಿದ್ದಾರೆ ಎಂದು ಹೇಳಿಲ್ಲ. ತುಂಗಾ, ಕೃಷ್ಣೆ ಮೊದಲಾದ ನೀರಾವರಿ ಯೋಜನೆಗಳಿಗೆ ಹಣ ನೀಡಿಲ್ಲ. ಅಭಿವೃದ್ಧಿಗೆ ಒಂದು ತೊಟ್ಟು ನೀರು ಕೂಡ ಕೊಟ್ಟಿಲ್ಲ. ಬೆಂಗಳೂರಿನಲ್ಲಿ ಎಲ್ಲವನ್ನೂ ಸುರಂಗ ಮಾಡಲು ಯೋಜನೆ ರೂಪಿಸಿದ್ದಾರೆ. 40,000 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಘೋಷಿಸಲಾಗಿದೆ. ಫೆರಿಫರಲ್‌ ರಿಂಗ್‌ ರಸ್ತೆಯನ್ನೇ ಇನ್ನೂ ಮಾಡಿಲ್ಲ. ಇನ್ನು ಸುರಂಗ ಯೋಜನೆ ಮಾಡಲು ಯಾರೂ ಮುಂದೆ ಬರಲ್ಲ. ಬೆಂಗಳೂರಿನ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ರಸ್ತೆ ಗುಂಡಿ ಮುಚ್ಚುವ, ಕಸದ ಸಮಸ್ಯೆ ಪರಿಹರಿಸುವ ಬಗ್ಗೆ ಹೇಳಿಲ್ಲ. ಚುನಾವಣೆ ಇರುವುದರಿಂದ ಇಂತಹ ಬೋಗಸ್‌ ಬಜೆಟ್‌ ಮಂಡಿಸಲಾಗಿದೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X