ಉಡುಪಿ ನಗರದ ಕರಾವಳಿ ಬೈಪಾಸ್ ಬಳಿ ಇರುವ ಶಾರದ ಇಂಟರ್ ನ್ಯಾಷನಲ್ ಹೋಟಲ್ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ಸಾಗಿದ್ದಾರೆ.

ಕರಾವಳಿ ಬೈಪಾಸ್ ನಲ್ಲಿರುವ ಗುಜರಿ ಅಂಗಡಿ ಮತ್ತು ಶಾರದ ಇಂಟರ್ ನ್ಯಾಶನಲ್ ಹೋಟೆಲ್ ನಡುವಿನ ಕಾಲಿ ಜಾಗದಲ್ಲಿ ರಾತ್ರಿ 7-30 ರ ಸಮಯಕ್ಕೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತು ಸ್ಥಳಿಯರು ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ಹೆಚ್ಚಿನ ಹಾನಿ ಉಂಟಾಗುವುದನ್ನು ತಪ್ಪಿಸಿದ್ದಾರೆ. ಸದ್ಯ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದ್ದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

