ಶಿವಮೊಗ್ಗ ನಗರದ ಮೀನಾಕ್ಷಿ ಭವನದ ಬಳಿ ಸಿಪಿಐ ಸಂತೋಷ್ ಕುಮಾರ್ ಅವರ ಕರ್ತವ್ಯದ ವೇಳೆ ಅಪ್ರಾಪ್ತ ಬಾಲಕನೋರ್ವ ವಾಹನ ಚಲಾಯಿಸಿಕೊಂಡು ಬಂದಿದ್ದು, ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಆತನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿದೆ.

ಯಮಹ ಫ್ಯಾಸಿನೋ ಮೊಫೇಡ್ ಚಲಾಯಿಸಿಕೊಂಡು ಬಂದ ಅಪ್ರಾಪ್ತ ವಯಸ್ಸಿನ ಬಾಲಕನನ್ನ ತಪಾಸಣೆ ಮಾಡಲಾಗಿದೆ. ಬಾಲಕನಿಂದ ವಾಹನವನ್ನ ವಶಪಡಿಸಿಕೊಳ್ಳಲಾಗಿದೆ. ವಾಹನ ವಶಪಡಿಸಿಕೊಂಡು ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ | ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪತ್ರಿಕಾ ವಿತರಕರು
ಬೈಕ್ ಮಾಲೀಕರ ವಿರುದ್ಧ ಶಿವಮೊಗ್ಗ ನ್ಯಾಯಾಲಯಕ್ಕೆ ಸಿಪಿಐ ದೋಷಾರೋಪ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಬೈಕ್ ಮಾಲೀಕರಿಗೆ ದಂಡ ವಿಧಿಸಿ ಆದೇಶಿಸಿದೆ.
