ಚಿತ್ರದುರ್ಗ | ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ.

Date:

Advertisements

“ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಬಹಳ ದೊಡ್ಡದು. ಇದು ಸಾಕ್ಷರತೆ ಹೆಚ್ಚಲು ಕಾರಣವಾಯಿತು” ಎಂದು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂಆರ್ ಮಂಜುನಾಥ್ ಸ್ಮರಿಸಿದರು.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಕ್ಲಸ್ಟರ್ ಮಟ್ಟದ ತರಾಸು ಶಿಕ್ಷಕರ ವೇದಿಕೆಯು ಶಾದಿ ಮಹಲ್ ನಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಪುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು “ಸಾವಿತ್ರಿಬಾಯಿ ಫುಲೆ ಅವರು 150 ವರ್ಷಗಳ ಹಿಂದೆಯೇ ಶಿಕ್ಷಣದ ಮಹತ್ವ ಅರಿತಿದ್ದರು. ಅದನ್ನು ದಾಸೋಹದ ರೂಪದಲ್ಲಿ ಮಹಿಳೆಯರಿಗೆ ಹಂಚಿದ್ದರಿಂದ ಹೆಚ್ಚಿನ ಜನರು ಶಿಕ್ಷಣ ಪಡೆಯಲು ಸಾಧ್ಯವಾಯಿತು. ವಿಶೇಷವಾಗಿ ಮಹಿಳೆಯರು ಅನೇಕ ರಂಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು.

1001652779
ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ

“ಸಾವಿತ್ರಿಬಾಯಿ ತಮ್ಮ 17ನೇ ವಯಸ್ಸಿನಲ್ಲಿ ಶಾಲೆ ಆರಂಭಿಸಿದ್ದರು. ಅದಕ್ಕೆ ಸಾಕಷ್ಟು ವಿರೋಧವಿತ್ತು. ಸಾವಿತ್ರಿಬಾಯಿ ಅವರು ಆ ಕಾಲದಲ್ಲಿ ಶಿಕ್ಷಣ ಕೊಡಲು ಮುಂದಾದಾಗ ಜನ ಕಲ್ಲಿನಿಂದ ಅವರಿಗೆ ಹೊಡೆಯುತ್ತಿದ್ದರು. ಆದರೂ ವಿರೋಧಗಳ ನಡುವೆಯೂ ಶಿಕ್ಷಣ ಕೊಡುವುದನ್ನು ಬಿಡಲಿಲ್ಲ. ಆಗ ಅವರ ಪತಿ ಜ್ಯೋತಿಬಾ ಫುಲೆ ಅವರ ಬೆನ್ನಿಗೆ ನಿಂತು ಬೆಂಬಲಿಸಿದ್ದರು. ಇಂದು ಜನ ಅವರ ತ್ಯಾಗ ನೆನೆದು ಅವರ ಭಾವಚಿತ್ರಕ್ಕೆ ಹೂಮಳೆಗರೆಯುತ್ತಿದ್ದಾರೆ. ಇದೇ ಶಿಕ್ಷಣಕ್ಕಿರುವ ದೊಡ್ಡ ಶಕ್ತಿ’. ಆರಂಭದಲ್ಲಿ ಅವರ ಶಾಲೆಯಲ್ಲಿ ಎಂಟು ಮಕ್ಕಳಷ್ಟೇ ಇದ್ದರು. ನಂತರ ಆ ಸಂಖ್ಯೆ 500ರ ಗಡಿ ದಾಟಿತು. ದೇಶದ ಮೊದಲ ಅನಾಥಾಶ್ರಮ, ವಿಧವಾ ಆಶ್ರಮ, ಕೂಲಿ ಕಾರ್ಮಿಕರ ಮಕ್ಕಳಿಗೆ ರಾತ್ರಿ ಶಾಲೆ ತೆರೆದವರು ಸಾವಿತ್ರಿಬಾಯಿ. ಪ್ಲೇಗ್‌ ರೋಗ ಬಂದಾಗ ಗಂಜಿ ಕೇಂದ್ರ ತೆರೆದಿದ್ದರು”ಎಂದು ಸ್ಮರಿಸಿದರು.

Advertisements
1001652780 1

ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಮಾತನಾಡಿ “ಇಂದಿನ ಹೊಸ ಶಿಕ್ಷಣ ನೀತಿಯಲ್ಲಿನ ಅನೇಕ ವಿಚಾರಗಳನ್ನು ಸಾವಿತ್ರಿಬಾಯಿ ಅಂದಿನ ಕಾಲದಲ್ಲೇ ಹೇಳಿದ್ದರು. ಪ್ರಚಾರದ ಕೊರತೆಯಿಂದ ಅವರು ಬೆಳಕಿಗೆ ಬಂದಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸಂಶೋಧನೆ, ಪುಸ್ತಕದ ಮೂಲಕ ದಾಖಲಿಸುವ ಉತ್ತಮ ಕೆಲಸ ನಡೆಯುತ್ತಿದೆ. ಎಂದು ಅಭಿಪ್ರಾಯ ಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಗರದಲ್ಲಿ ಪೊಲೀಸ್ ಇಲಾಖೆಯ
ಪೊಲೀಸರೊಂದಿಗೆ ಮ್ಯಾರಥಾನ್ 2025.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಟಿ ವೀರೇಶ್ ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ ಸುರೇಶ್, ಪಿ ರಾಜಣ್ಣ, ಜಾಕೀರ್ ಹುಸೇನ್, ಮಾರುತಿ ಭಂಡಾರಿ, ತಿಪ್ಪೇಸ್ವಾಮಿ, ಕೃಷ್ಣಮೂರ್ತಿ, ಅಶೋಕ್, ಪ್ರಹ್ಲಾದ್, ಪಿಡಿಒ ಓಬಣ್ಣ, ಶಶಿರಾಜ್, ಮಾರಣ್ಣ, ಜಯಲಕ್ಷ್ಮಿ, ರಾಧಾಮಣಿ, ಸುಜಾತ, ಸೌಭಾಗ್ಯಮ್ಮ, ತಿಪ್ಪಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ...

ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಇಡೀ ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತದೆ. ಶಾಲೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ರಾಜಕೀಯ...

ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ...

Download Eedina App Android / iOS

X