ವಿಜಯಪುರ | ಮಹಿಳೆಯರಿಗೆ ಅವಕಾಶ ಕಲ್ಪಿಸಿದರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ: ಸಚಿವ ಎಂ ಬಿ ಪಾಟೀಲ್

Date:

Advertisements

ಮಹಿಳೆಯರಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಾಧ್ಯ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿತರಣಾ ಕೇಂದ್ರದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ʼಮಹಿಳಾ ಸಾಂಸ್ಕೃತಿಕ ಹಬ್ಬ-2025ʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮಹಿಳೆ ಇಂದು ಹಲವಾರು ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ಇಂದು ಇಡೀ ವಿಶ್ವದಲ್ಲೇ ಅಗ್ರಸ್ಥಾನ ಪಡೆದುಕೊಂಡಿದ್ದಾಳೆ. ಮಹಿಳಾ ವಿವಿಗಳು ಮಹಿಳೆಯರ ಶಕ್ತಿಯನ್ನು ಗುರುತಿಸುವ ಹಾಗೂ ಅವರ ಸೌಭಾಗ್ಯವನ್ನು ಬೆಳೆಸುವ ಪ್ರಮುಖ ಕೇಂದ್ರವಾಗಿವೆ. ಇದು ಕೇವಲ ಶಿಕ್ಷಣ ನೀಡುವ ಕೇಂದ್ರವಷ್ಟೇ ಅಲ್ಲ. ಮಹಿಳೆಯರಲ್ಲಿ ಆತ್ಮವಿಶ್ವಾಸ, ಸ್ವಾಯತ್ತತೆ ಮತ್ತು ನಾಯಕತ್ವ ಗುಣಗಳನ್ನು ವೃದ್ಧಿಸಲು ಸಹಾಯ ಮಾಡುತ್ತದೆ. ಸಮಾನತೆ ಮತ್ತು ನ್ಯಾಯದ ತತ್ವಗಳನ್ನು ಬೆಳೆಸುವ ಈ ಸಂಸ್ಥೆ, ಮಹಿಳೆಯರನ್ನು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ” ಎಂದರು.

Advertisements

“ಸರ್ಕಾರವು ಈ ಮಹಿಳಾ ವಿವಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ, ಇನ್ನೂ ಹೆಚ್ಚಿನ ಹೆಣ್ಣುಮಕ್ಕಳು ಗುಣಾತ್ಮಕ ಶಿಕ್ಷಣ ಪಡೆದು, ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಲು ಸಾಧ್ಯ. ಸಮಗ್ರ ಸಮಾಜದ ಬೆಳೆವಣಿಗೆಗೆ ಮಹಿಳೆಯರ ಶಿಕ್ಷಣ ಅತ್ಯಗತ್ಯವಾಗಿರುವುದರಿಂದ ಈ ವಿಶ್ವವಿದ್ಯಾನಿಲಯ ಮತ್ತಷ್ಟು ಬಲಪಡಿಸಲು ನಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಅಗತ್ಯ” ಎಂದು ತಿಳಿಸಿದರು.

WhatsApp Image 2025 03 08 at 4.45.46 PM 1

ವಿವಿ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಮಾತನಾಡಿ, “ಮಹಿಳಾ ಸಬಲೀಕರಣವನ್ನು ವೃದ್ಧಿಸಲು ನಮ್ಮ ವಿಶ್ವವಿದ್ಯಾನಿಲಯದ ಬೋಧಕ ಮತ್ತು ಬೋಧಕೇತರ ವರ್ಗ ನಿರಂತರ ಶ್ರಮವಹಿಸುತ್ತಿದ್ದು, ವಿದ್ಯಾರ್ಥಿನಿಯರು ನೀಡಲಾಗುವ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಸಮಗ್ರ ಅಭಿವೃದ್ಧಿಯತ್ತ ಮುಂದುವರಿಯಬೇಕು. ನಮ್ಮ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಕಲೆ, ಕ್ರೀಡೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರುತ್ತಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹತ್ತರ ಸಾಧನೆಗಳನ್ನು ಮಾಡುತ್ತಾ, ಮಹಿಳಾ ಶಕ್ತಿಯ ಮಹತ್ವವನ್ನು ಮತ್ತಷ್ಟು ದೃಢಪಡಿಸುತ್ತಿದ್ದಾರೆ” ಎಂದರು.

ಇದನ್ನೂ ಓದಿ: ವಿಜಯಪುರ | ಮಹಿಳಾ ದಿನಾಚರಣೆ; ಅಕ್ಕಮಹಾದೇವಿ ವಿವಿಯಲ್ಲಿ ಸಾಂಸ್ಕೃತಿಕ ಹಬ್ಬ

ಕಾರ್ಯಕ್ರಮದಲ್ಲಿ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಆಪ್ಪಾಸಿ ಬಬಲೇಶ್ವರ, ಜಿಲ್ಲಾ ಉಸ್ತುವಾರಿ ಸಚಿವರ ಮಾಧ್ಯಮ ಸಲಹೆಗಾರ ಮಹಾಂತೇಶ ಬಿರಾದಾರ, ಪತ್ರಕರ್ತ ಮಹೇಶ ಶೆಟಗಾರ, ಮಹಿಳಾ ವಿವಿಯ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X