ಮಂಗಳೂರು | ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆ

Date:

Advertisements

ಮಂಗಳೂರು ಹೊರವಲಯದ ಫರಂಗಿಪೇಟೆಯಿಂದ ಫೆ.25ರಂದು ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

12 ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಕೊನೆಗೂ ಉಡುಪಿಯ ಕಲ್ಸಂಕದ ಬಳಿ ಇರುವ ಡಿ ಮಾರ್ಟ್‌ ಮಾರಾಟ ಮಳಿಗೆಯ ಬಳಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದೀಗ ಪೊಲೀಸರು ಆತನನ್ನು ಮಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.

ಕಳೆದ 12 ದಿನಗಳಿಂದ ದಿಗಂತ್ ನ ಪತ್ತೆಗಾಗಿ ಪೊಲೀಸರ ತಂಡ ವಿವಿಧ ರೀತಿಯ ಕಾರ್ಯಾಚರಣೆಗಳನ್ನು ನಡೆಸಿತ್ತು. ಪೊಲೀಸರಿಗೆ ಈ ಪ್ರಕರಣ ಸವಾಲಾಗಿ ಪರಿಣಮಿಸಿತ್ತು. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ.ನ ಭಾಗದಲ್ಲಿ ಹುಡುಕಾಟ ಮಾಡಲು ಯೋಜನೆ ತಯಾರಿಸಿ ಕಾರ್ಯ ಆರಂಭಿಸಿತ್ತು.

Advertisements

40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಮಾಡ್, ಡೋನ್ ಕ್ಯಾಮೆರಾಗಳನ್ನು ಬಳಸಿ ಹುಡುಕಾಟ ನಡೆಸಿದ್ದರು. ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವು ವಿಧಾನಸಭೆಯ ಅಧಿವೇಶನದಲ್ಲೂ ಕೂಡ ಚರ್ಚೆಯಾಗಿತ್ತು.

ಫೋನ್ ಮೂಲಕ ಕುಟುಂಬಸ್ಥರ ಜೊತೆ ಮಾತುಕತೆ

ಡಿ ಮಾರ್ಟ್‌ ಮಾರಾಟ ಮಳಿಗೆಯ ಬಳಿ ಪತ್ತೆಯಾದ ದಿಗಂತ್ ಅನ್ನು ಅಲ್ಲಿನ ಸಿಬ್ಬಂದಿಗಳು ಗಮನಿಸಿದ್ದಾರೆ. ಆ ಬಳಿಕ ಆತನನ್ನು ವಿಚಾರಿಸಿದಾಗ ನಾಪತ್ತೆಯಾದ ದಿಗಂತ್ ಎಂದು ಖಚಿತಪಡಿಸಿಕೊಂಡಿದ್ದಾರೆ. ಆ ಬಳಿಕ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಸದ್ಯ ಕುಟುಂಬಸ್ಥರಿಗೂ ಮಾಹಿತಿ ನೀಡಿದ್ದು, ಬಳಿಕ ದೂರವಾಣಿಯಲ್ಲಿ ಮಾತನಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಫೋನ್ ಸಂಭಾಷಣೆಯ ವೇಳೆ, ‘ತನ್ನನ್ನು ಬಲವಂತವಾಗಿ ಕರೆದುಕೊಂಡು ಹೋಗಲಾಗಿತ್ತು’ ಎಂದು ತಾಯಿಯ ವೇಳೆ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಗಂಗಾವತಿ ಘಟನೆ: ಮೂವರು ಆರೋಪಿಗಳ ಪೈಕಿ ಇಬ್ಬರ ಬಂಧನ

ಏನಿದು ಪ್ರಕರಣ?

ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದ ದಿಗಂತ್, ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದ. ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X