ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್‌ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಗುರುವಾರ ರಾತ್ರಿ ಘಟನೆ ನಡೆದಿತ್ತು. ಇಸ್ರೇಲ್ ಮೂಲದ ನಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಇಬ್ಬರು ತುಂಗಭದ್ರಾ ಎಡದಂಡೆ ನಾಲೆ ದಡದಲ್ಲಿ ಸಂಗೀತ ಕೇಳುತ್ತಾ ಕುಳಿದಿದ್ದರು. ಈ ವೇಳೆ, ಅಲ್ಲಿಗೆ ಬಂದ ಮೂವರು ಆರೋಪಿಗಳು ಮಹಿಳೆಯರ ಬಳಿ ಹಣ ಕೇಳಿದಿದ್ದಾರೆ. ಹಣ ಕೊಡಲು ಮಹಿಳೆಯರು ನಿರಾಕಿಸಿದ್ದು, ಕುಪಿತಗೊಂಡ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ, ಸ್ಥಳದಲ್ಲಿದ್ದ ಪ್ರವಾಸಿಗರ ಮೇಲೂ ಪುಂಡರು ಹಲ್ಲೆ ನಡೆಸಿದ್ದಾರೆ. ಘಟನೆ ವೇಳೆ, ಒರಿಸ್ಸಾ ಮೂಲದ ಪ್ರವಾಸಿ ಬೀಬಾಷಾ ನಾಲೆಗೆ ಬಿದ್ದಿದ್ದು, ಶನಿವಾರ ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿದೆ.
ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆಯರು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀರು ಇಬ್ಬರು ಆರೋಪಿಗಳನ್ನು ಬಂಂಧಿಸಿದ್ದಾರೆ. ಓರ್ವ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಬಂಧಿತರನ್ನು ಗಂಗಾವತಿಯ ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22) ಮತ್ತು ಚೇತನ್ ಸಾಯಿ (21) ಎಂದು ಹೆಸರಿಸಲಾಗಿದೆ. ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸ್ ತಂಡ ಶೋಧ ನಡೆಸುತ್ತಿದೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು. ಪ್ರತಿಯೊಬ್ಬರೂ ಸಮಾನತೆ ಮತ್ತು ಭದ್ರತೆಯಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ. ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.