ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಸುಮಾರು 14 ಮಂದಿ ಸಾವನ್ನಪ್ಪಿದ್ದರೆ, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ನಿರ್ಬಂಧವನ್ನು ಇನ್ನಷ್ಟೂ ಹೆಚ್ಚಿಸುವಂತೆ ಕರೆ ನೀಡಿದ್ದಾರೆ. ಕದನ ವಿರಾಮದ ಬಗ್ಗೆ ಅಮೆರಿಕ ಮತ್ತು ಉಕ್ರೇನ್ ಮಾತುಕತೆ ನಡೆಸುವ ಮುನ್ನವೇ ಈ ಘಟನೆ ನಡೆದಿದೆ.
ಶುಕ್ರವಾರ ತಡರಾತ್ರಿ ಉಕ್ರೇನ್ನ ಪೂರ್ವ ಡೊನೆಟ್ಸ್ಕ್ ಪ್ರದೇಶದ ಡೊಬ್ರೊಪಿಲಿಯಾ ಕೇಂದ್ರದಲ್ಲಿ ರಷ್ಯಾ ದಾಳಿ ನಡೆಸಿದೆ. ಈ ದಾಳಿಯಿಂದ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಇದನ್ನು ಓದಿದ್ದೀರಾ? ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!
ಇದಾದ ಬಳಿಕ ಶನಿವಾರ ಮುಂಜಾನೆ ನಡೆದ ಡ್ರೋನ್ ದಾಳಿಯಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೂರ್ವ ಖಾರ್ಕಿವ್ ಪ್ರದೇಶದ ಮಿಲಿಟರಿ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ಹೇಳಿದ್ದಾರೆ.
ಬೊಗೊಡುಖಿವ್ನಲ್ಲಿ ರಷ್ಯಾ ಎರಡು ಕ್ಷಿಪಣಿಗಳು ಮತ್ತು 145 ಡ್ರೋನ್ಗಳನ್ನು ಹಾರಿಸಿದೆ ಎಂದು ಉಕ್ರೇನಿಯನ್ ವಾಯುಪಡೆ ತಿಳಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದ ಮೇಲೆ ಹೊಸ ನಿರ್ಬಂಧಗಳು ಮತ್ತು ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ ನಂತರ ದಾಳಿ ನಡೆದಿದೆ.
