ಧರ್ಮಸ್ಥಳ ಸೌಜನ್ಯ ಪ್ರಕರಣ: ಸಮಾನ ಮನಸ್ಕರ ಸಮಾಲೋಚನಾ ಸಭೆಗೆ ಪೊಲೀಸರಿಂದ ಅಡ್ಡಗಾಲು!

Date:

Advertisements

ಕನ್ನಡದ ಯೂಟ್ಯೂಬರ್ ‘ದೂತ- ಸಮೀರ್ ಎಂಡಿ’ಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿರುವ ವಿಡಿಯೋ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಕಳೆದ ಫೆಬ್ರವರಿ 27ರಂದು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಆಗಿರುವ ವಿಡಿಯೋ ಸದ್ಯ 17 ಮಿಲಿಯನ್ ವೀಕ್ಷಣೆ ಕಂಡಿದೆ.

ಈ ವಿಡಿಯೋ ವಿಚಾರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾ.9ರ ಬೆಳಗ್ಗೆ 10ಕ್ಕೆ ಸಮಾನ ಮನಸ್ಕರು ಸಮಾಲೋಚನಾ ಸಭೆಯನ್ನು ಆಯೋಜಿಸಿದ್ದರು.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಸೌಜನ್ಯ ಪರ ಸಾಹಿತಿ, ಚಿಂತಕ, ಪತ್ರಕರ್ತರು, ಹೋರಾಟಗಾರರ ಸಮಾಲೋಚನಾ ಸಭೆ ಕರೆಯಲಾಗಿತ್ತು. ಆದರೆ ಕನ್ನಡ ಸಾಹಿತ್ಯ ಪರಿಷತ್ ಒತ್ತಡಕ್ಕೊಳಗಾಗಿ ಕೊನೇ ಕ್ಷಣದಲ್ಲಿ ಸಭಾಂಗಣದ ಅನುಮತಿಯನ್ನು ರದ್ದುಗೊಳಿಸಿದ್ದರಿಂದ ಸಮಾಲೋಚನಾ ಸಭೆಯನ್ನು ಮುಂದೂಡಲಾಗಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

Advertisements
1003718911

ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣವನ್ನು ಬಾಡಿಗೆ ಪಾವತಿಸಿ ಕಾರ್ಯಕ್ರಮಕ್ಕೆ ನಿಗದಿಗೊಳಿಸಲಾಗಿತ್ತು. ಕಾರ್ಯಕ್ರಮದ ಬಗ್ಗೆ ಪರಿಷತ್ ಜೊತೆಗೆ ಚರ್ಚೆ ನಡೆಸಲಾಗಿತ್ತು. ಆದರೆ ಸಾಹಿತ್ಯ ಪರಿಷತ್ ಗೆ ಬಂದ ಲೀಗಲ್ ನೋಟಿಸ್ ಮತ್ತು ಪೊಲೀಸ್ ನೋಟಿಸ್ ಆಧಾರದಲ್ಲಿ ಸಭಾಂಗಣವನ್ನು ನೀಡಲಾಗುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು 08.03.2025 ರಂದು ರಾತ್ರಿ 10.30 ಕ್ಕೆ ಸಂಘಟಕರಲ್ಲೋರ್ವರಾದ ಬೈರಪ್ಪ ಹರೀಶ್ ಕುಮಾರ್ ಅವರಿಗೆ ಲಿಖಿತ ನೋಟಿಸ್ ಕಳಿಸಿದ್ದಾರೆ‌ ಎಂದು ಸಮಾನ ಮನಸ್ಕ ಸದಸ್ಯರು ಮಾಹಿತಿ ನೀಡಿದ್ದಾರೆ.

ದಿಢೀರನೆ ಸಭಾಂಗಣ ನಿರಾಕರಣೆಯ ಹಿನ್ನಲೆಯಲ್ಲಿ 09.03.2025 ರವಿವಾರ 10.30 ಕ್ಕೆ ಅಕ್ಕಮಹಾದೇವಿ ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆಸಲುದ್ದೇಶಿಸಿದ್ದ “ಸೌಜನ್ಯ ಸಮಾಲೋಚನಾ ಸಭೆ”ಯನ್ನು ಮುಂದೂಡಲಾಗಿದೆ ಎಂದು ಸಮಾನ ಮನಸ್ಕ ಸದಸ್ಯರು ತಿಳಿಸಿದ್ದಾರೆ.

1003718910

“ಮುಂಡಾಸುಧಾರಿಗಳು, ಊಳಿಗಮಾನ್ಯದ ಪಳಿಯುಳಿಕೆಗಳು ಸಭೆಗೆ ತಾತ್ಕಾಲಿಕ ಅಡ್ಡಿ ಮಾಡಿರಬಹುದು. ಆದರೆ ಸಮಾನ ಮನಸ್ಕರೆಲ್ಲರೂ ಒಂದು ದೊಡ್ಡ ತಂಡವಾಗಿ ಮುಂಡಾಸುಧಾರಿಗಳ ವಿರುದ್ದ ಕಾನೂನು ಹೋರಾಟವೂ ಸೇರಿದಂತೆ ಎಲ್ಲ ಚಳವಳಿಗಳನ್ನು ಇನ್ನಷ್ಟೂ ಪರಿಣಾಮಕಾರಿಯಾಗಿ ಮುಂದುವರೆಸಲಿದೆ. ಊಳಿಗಮಾನ್ಯ ದರ್ಪದ ಅಂತ್ಯ ಸನಿಹದಲ್ಲಿದೆ” ಎಂದು ಬೆಂಗಳೂರಿನ ಸಮಾನ ಮನಸ್ಕರು ಆಕ್ರೋಶ ಹೊರಹಾಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X