ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಭಾನುವಾರ ಮುಂಜಾನೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ಹೃದಯ ವಿಭಾಗಕ್ಕೆ ಅವರನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಜಗದೀಪ್ ಧನಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇದನ್ನು ಓದಿದ್ದೀರಾ? ಜಗದೀಪ್ ಧನಕರ್ | ಅಂದು ಸಮಾಜವಾದಿ, ಇಂದು ಕೋಮುವಾದಿ
73 ವರ್ಷದ ಜಗದೀಪ್ ಧನಕರ್ ಅವರಿಗೆ ದಿಢೀರ್ ಆಗಿ ಅಸ್ವಸ್ಥತೆ ಕಾಣಿಸಿಕೊಂಡಿದೆ, ಎದೆನೋವು ಕೂಡಾ ಉಂಟಾದ ಕಾರಣ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸದ್ಯ ಉಪರಾಷ್ಟ್ರಪತಿಯವರಿಗೆ ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ಜಗದೀಪ್ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ (ಸಿಸಿಯು) ಗೆ ದಾಖಲಿಸಲಾಗಿದೆ.
