ಬೈಕ್‌ನಲ್ಲಿ ಬಂದ ಅಪರಿಚಿತರು ಪತ್ರಕರ್ತನೋರ್ವನಿಗೆ ಗುಂಡಿಕ್ಕಿ ಹತ್ಯೆ ಮಾಡಿ, ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ- ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಹಲವು ದಿನಗಳಿಂದ ಬೆದರಿಕೆ ಕರೆಗಳನ್ನು ಬರುತ್ತಿದ್ದವು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳೀಯ ಹಿಂದಿ ದೈನಿಕದಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಬಾಜ್ಪಾಯಿ (35) ಎಂಬವರಿಗೆ ಸೀತಾಪುರ- ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಬಂದ ಅಪರಿಚಿತರು ಶನಿವಾರ ಗುಂಡಿಕ್ಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಬೀದರ್ | ಹಿರಿಯ ಪತ್ರಕರ್ತ ಕಾಜಿ ಅಲಿಯೋದ್ದೀನ್‌ಗೆ ಕರ್ನಾಟಕ ಉರ್ದು ಅಕಾಡೆಮಿ ಪ್ರಶಸ್ತಿ
ರಾಘವೇಂದ್ರ ಕೂಡಾ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸೀತಾಪುರ ಎಎಸ್‌ಪಿ ಪ್ರವೀಣ್ ರಂಜನ್ ಸಿಂಗ್, “ಪತ್ರಕರ್ತನ ಹೆಗಲಿಗೆ ಮೂರು ಬುಲೆಟ್ ಮತ್ತು ಎದೆಗೆ ಒಂದು ಬುಲೆಟ್ ತಗುಲಿದೆ. ಆರೋಪಿಗಳು ಗುಂಡು ಹಾರಿಸಿದ ಬಳಿಕ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.
ಸ್ಥಳೀಯರ ಸಹಾಯ ಪಡೆದು ಪೊಲೀಸರು ರಾಘವೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ರಾಘವೇಂದ್ರ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ ರಾಘವೇಂದ್ರ ಅವರಿಗೆ ಹಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಕುಟುಂಬಸ್ಥರು ಮಾಧ್ಯಮಕ್ಕೆ ತಿಳಿಸಿದ್ದಾರೆ.
“ಸದ್ಯ ಸಾಕ್ಷಿ ಸಂಗ್ರಹಿಸಲಾಗುತ್ತಿದೆ. ಜಿಲ್ಲಾ ಗಡಿಗಳಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಇತರೆ ಕಾನೂನಾತ್ಮಕ ಕಾರ್ಯಗಳನ್ನು ನಡೆಸಲಾಗುತ್ತಿದೆ” ಎಂದು ಎಎಸ್‌ಪಿ ಸಿಂಗ್ ಹೇಳಿದ್ದಾರೆ. ಸದ್ಯ ಪತ್ರಕರ್ತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
