ಕೊಪ್ಪಳ | ವಿದ್ಯಾರ್ಥಿ ಯುವಜನರ ವಿರೋಧಿ ಬಜೆಟ್‌ ಸಾರ್ವಜನಿಕ ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ: ಎಸ್‌ಎಫ್‌ಐ

Date:

Advertisements

2025-26ನೇ ಸಾಲಿನ ರಾಜ್ಯ ಬಜೆಟ್ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಕಡೆಗಣನೆ ಮಾಡಿದ್ದು, ವಿದ್ಯಾರ್ಥಿ ಯುವಜನರ ವಿರೋಧಿ ಬಜೆಟ್ ಆಗಿದೆ. ವಿದ್ಯಾರ್ಥಿಗಳು ಹಲವಾರು ನಿರೀಕ್ಷೆಯಲ್ಲಿದ್ದರು. ಆದರೆ ಈ ಬಜೆಟ್ ವಿದ್ಯಾರ್ಥಿ ಯುವಜನರ ನಿರೀಕ್ಷೆಯನ್ನು ಹುಸಿಮಾಡಿದೆ ಎಂದು ಎಸ್‌ಎಫ್‌ಐ ಕೊಪ್ಪಳ ಜಿಲ್ಲಾಧ್ಯಕ್ಷ ಗ್ಯಾನೇಶ್ ಕಡಗದ ಅಸಮಾಧಾನ ವ್ಯಕ್ತಪಡಿಸಿದರು.

“ಕೊಠಾರಿ ಆಯೋಗದ ವರದಿ ಶಿಫಾರಸಿನ ಪ್ರಕಾರ ಬಜೆಟ್‌ನಲ್ಲಿ ಶೇ.30ರಷ್ಟು ಶಿಕ್ಷಣಕ್ಕಾಗಿ ಮೀಸಲಿಡಬೇಕು. ಆದರೆ ಇಂದಿನ ಬಜೆಟ್ ಶೇ.10ರಷ್ಟು ಮೀಸಲಿಡುವ ಮೂಲಕ ಶಿಕ್ಷಣ ವಿರೋಧಿ ಬಜೆಟ್ ಆಗಿದೆ” ಎಂದು ಆರೋಪಿಸಿದರು.

“ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿಯಿರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು 23,000 ಶಿಕ್ಷಕ ಹುದ್ದೆಗಳು ಮತ್ತು ರಾಜ್ಯದಲ್ಲಿ 59,000 ಶಿಕ್ಷಕ ಹುದ್ದೆಗಳು ಖಾಲಿ ಇದ್ದರೂ ಭರ್ತಿಮಾಡಲು ಮುಂದಾಗಿಲ್ಲ. ಇದು ಶಾಲಾ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುವ ವ್ಯವಸ್ಥಿತ ದಾಳಿಯಾಗಿದೆ” ಎಂದು ಆರೋಪಿಸಿದರು.

Advertisements

“ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ವಿವಿಯನ್ನು ಬಲಪಡಿಸುವ ಬದಲು ಡಾ ಮನಮೋಹನ್ ಸಿಂಗ್ ಬೆಂಗಳೂರು ವಿಶ್ವವಿದ್ಯಾಲಯವೆಂದು ಮರುನಾಮಕರಣ ಮಾಡಲು ಮುಂದಾಗಿರುವ ಕ್ರಮ ಖಂಡನೀಯ” ಎಂದರು.

“ರಾಜ್ಯದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದರೆ ಈಗಿರುವ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಈ ಬಜೆಟ್ ವಿಫಲವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಂದ ದೂರಮಾಡಿದ್ದು, ಈಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಿ ಪಂಚಾಯಿತಿಗೆ ಒಂದು ಶಾಲೆ ಎಂಬುವ ಸರ್ಕಾರದ ನಿಲುವು ಖಂಡನೀಯ” ಎಂದರು.

“8ನೇ ತರಗತಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸೈಕಲ್ ಯೋಜನೆಯ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಮಾಸಿಕ ಹಣವನ್ನು ₹1,850 ರಿಂದ ₹3,500ಕ್ಕೆ ಹೆಚ್ಚಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಅರೋಗ್ಯ ಭದ್ರತೆ ಒದಗಿಸುವಲ್ಲಿ ಸರ್ಕಾರ ವಿಪಲವಾಗಿದೆ” ಎಂದು ಹೇಳಿದರು.

“ಸರ್ಕಾರಿ ಪ್ರಥಮ ದರ್ಜೆ ಎಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿಮಾಡುವ ಕ್ರಮವನ್ನು ಸ್ವಾಗತಿಸುತ್ತ ರಾಜ್ಯದಲ್ಲಿ ಬಹುತೇಕ ಕಾಲೇಜುಗಳಲ್ಲಿ ಶೇ.90ರಷ್ಟು ಉಪನ್ಯಾಸಕರು ಅತಿಥಿ ಉಪನ್ಯಾಸಕರಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿ ಮಾಡಿಕೊಳ್ಳಬೇಕಿತ್ತು. ರಾಜ್ಯದಲ್ಲಿರುವ ಕಾಲೇಜುಗಳಿಗೆ ₹275 ಕೋಟಿ ಮೀಸಲಿಟ್ಟಿರುವುದು ಎಷ್ಟು ಕಾಲೇಜುಗಳಿಗೆ ಮೂಲ ಸೌಲಭ್ಯ ಒದಗಿಸಲು ಸಾಧ್ಯ ಎಂಬುದು ಯಕ್ಷ ಪ್ರಶ್ನೆಯಾಗಿದೆ. ರಾಜ್ಯದಲ್ಲಿ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಮತ್ತು ನರ್ಸಿಂಗ್ ಕಾಲೇಜು ತೆರೆಯಬೇಕು ಎಂಬುದು ನಮ್ಮ ಒತ್ತಾಯ. ಆದರೆ ಇದನ್ನು ಇಂದಿನ ಬಜೆಟ್ ಹುಸಿಯಾಗಿಸಿದೆ” ಎಂದು ಟೀಕಿಸಿದರು.

“ಯಲಬುರ್ಗಾದಲ್ಲಿ ನರ್ಸಿಂಗ್ ಕಾಲೇಜು ತೆರೆಯುವುದು ಸ್ವಾಗತಾರ್ಹ. ಆದರೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಭತ್ಯೆ ಹೆಚ್ಚಳ ಮಾಡಿಲ್ಲ. ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ. ಇದು ತೀವ್ರ ಖಂಡನೀಯ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಆದರೆ ರಾಜ್ಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಜಾರಿ ಮಾಡಲು ಈ ಬಜೆಟ್‌ನಲ್ಲಿ ಮುಂದಾಗಿಲ್ಲ” ಎಂದು ಹೇಳಿದರು.

“ವೃತಿಪರ ಶಿಕ್ಷಣ, ಉನ್ನತ ಶಿಕ್ಷಣ, ಸಂಶೋಧನೆಗೂ ಕೂಡಾ ಅನುದಾನ ನೀಡಿಲ್ಲ. ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಕರೆತರುವ ಪ್ರಮುಖ ಯೋಜನೆ ರೂಪಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಮೂಲಕ ಖಾಸಗೀಕರಣವನ್ನು ಉತ್ತೇಜನ ಮಾಡಲು ತೀರ್ಮಾನಿಸಿರುವುದು ಸ್ಪಷ್ಟವಾಗಿದೆ. ವಿದ್ಯಾರ್ಥಿ ಯುವಜನರ ನಿರೀಕ್ಷೆಯನ್ನು ಬಜೆಟ್ ಹುಸಿಗೊಳಿಸಿದೆ. ಒಟ್ಟಾರೆ ರಾಜ್ಯ ಬಜೆಟ್ ವಿದ್ಯಾರ್ಥಿ ಯುವಜನರ ವಿರೋಧಿ ಬಜೆಟ್ ಆಗಿದೆ” ಎಂದು ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್ ಯು, ಶಿವುಕುಮಾರ್, ಬಾಲಾಜಿ, ಕನಕಚಲ, ಹನುಮೇಶ್ ಸೇರಿದಂತೆ ಇತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X