ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಜಿಲ್ಲಾಧಿಕಾರಿಗಳಿಗೆ ಮೋರಗಾನಹಳ್ಳಿ ಗ್ರಾಮಸ್ಥರ ಅಳಲು

Date:

Advertisements

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು. 

 ಮೋರಗಾನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಅಹವಾಲು ನೀಡಿದ್ದರು.

 ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಕುಡಿಯುವ ನೀರಿನ ಸಮಸ್ಯೆಗೆ ತುರ್ತಾಗಿ ಪರಿಹಾರ ಒದಗಿಸಬೇಕೆಂದು ತಹಶೀಲ್ದಾರ್ ಮಂಜುನಾಥ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಾಂತರಾಜು ಅವರಿಗೆ ಸೂಚನೆ ನೀಡಿದರು.  

Advertisements
IMG 20250309 WA0344

ನಂತರ ಜಾನುವಾರುಗಳ ಮೇವಿನ ಬಗ್ಗೆ ಆಲಿಸಿದ ಅವರು ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರಲ್ಲದೆ ಜನರು ವಾಸಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿಬರಲು ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದಾಗ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ದೂರವಾಣಿ ಮೂಲಕ ಕೆಎಸ್‌ಆರ್‌ಟಿಸಿ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಿ ಬಸ್ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆ 7304975519, 0816-2213400ಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X