ಹಾವೇರಿ | ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ; ಸೌಜನ್ಯ ಪರ ಧ್ವನಿ ಎತ್ತಿದ ಸಮೀರ್ ಗೆ ಸೂಕ್ತ ರಕ್ಷಣೆ ಒದಗಿಸಲು ಡಿವೈಎಫ್ಐ ಆಗ್ರಹ

Date:

Advertisements

“ಧರ್ಮಸ್ಥಳ ಪಕ್ಕದ ಪಾಂಗಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ. ಈ ಕುರಿತು ಧ್ವನಿ ಎತ್ತಿದ ಯೂಟುಬರ್ ಸಮೀರ್ ಅವರಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಡಿವೈಎಫ್ಐ ರಾಜ್ಯ ಅಧ್ಯಕ್ಷೆ ಲವಿತ್ರ ವಸ್ತ್ರದ ಆಗ್ರಹಿಸಿದರು.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಸಮಿತಿ ಸಭೆಯಲ್ಲಿ ಮಾತನಾಡಿದರು.

“2012 ರಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನ್ಯಾಯ ಮರೀಚಿಕೆಯಾಗಿದ್ದು, ಆಕೆಯ ಕುಟುಂಬದವರು ಇಂದಿಗೂ ಕಣ್ಣೀರು ಹಾಕುತ್ತಿದ್ದಾರೆ. ರಾಜ್ಯ ಸರಕಾರ ಈ ಕೇಸ್ ಅನ್ನು ಮರು ತನಿಖೆ ಮಾಡಿ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕುವಂತೆ ಮಾಡಬೇಕು” ಎಂದು ಒತ್ತಾಯಿಸಿದರು.

Advertisements

“ಸೌಜನ್ಯ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡದೆ ಮುಚ್ಚಿಹಾಕಲಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ ಸಮೀರ್ ಮೇಲೆ ಪೋಲೀಸರು ಸೊಮೋಟೊ ಕೇಸ್ ಹಾಕಿದ್ದಾರೆ. ವಿಡಿಯೋ ಮೂಲಕ ಈ ಪ್ರಕರಣದ ವಾಸ್ತವತೆಯನ್ನು ಜನರೆದುರು ತರಲು ಪ್ರಯತ್ನಿಸಿದ ಸಮೀರ್ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು” ಎಂದು ಡಿವೈಎಫ್ಐ ರಾಜ್ಯ ಸಮಿತಿಯು ಆಗ್ರಹಿಸುತ್ತದೆ ಎಂದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು ಸಮಗ್ರ ತನಿಖೆಯಾಗಿ ಸತ್ಯ ಹೊರತಂದು ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಬೇಕು. ಅದು ಬಿಟ್ಟು ಪ್ರಕರಣವನ್ನು ಕೋಮು ರಾಜಕಾರಣದತ್ತ ತಿರುಚುತ್ತಿರುವುದದನ್ನು ಡಿವೈಎಫ್ಐ ತೀವ್ರವಾಗಿ ಖಂಡಿಸುತ್ತದೆ. ಎಲ್ಲಿ ಕೋಮುರಾಜಕಾರಣ ಶುರುವಾಗುತ್ತದೋ ಅಲ್ಲಿ ನ್ಯಾಯ ಮರೆಮಾಚುತ್ತದೆ. ಯಾವುದೇ ಅನ್ಯಾಯ, ಅತ್ಯಾಚಾರ, ಕೊಲೆ ಘಟನೆಗಳನ್ನು ಕೋಮುಭಾವನೆಯಿಂದ ನೋಡದೇ, ಶಿಕ್ಷೆಗೆ ಒಳಪಡಿಸುವ ಅಪರಾಧವಾಗಿ ನೋಡಬೇಕು” ಎಂದು ಹೇಳಿದರು.

“ಸೌಜನ್ಯ ಪ್ರಕರಣದಲ್ಲಿ ಕೋಮು ರಾಜಕಾರಣ ಮಾಡದೇ ಅವಳ ಕುಟುಂಬಕ್ಕೆ ನ್ಯಾಯ ಸಿಗಲು, ಪ್ರಕರಣದ ಮರು ತನಿಖೆ  ನಡೆಸಿ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಬೇಕು. ಈ ಕುರಿತು ಬೆಳಕು ಚೆಲ್ಲಿದ ಸಮೀರ್ ಮೇಲಿನ ಸೊಮೋಟೊ ಕೇಸ್ ಅನ್ನು ರಾಜ್ಯ ಸರಕಾರ ಹಿಂಪಡೆಯಬೇಕು ಹಾಗೂ ಸಮೀರ್ ಮತ್ತವನ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ಇಲ್ಲವಾದಲ್ಲಿ ನಾಡಿನಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ

ಸಭೆಯಲ್ಲಿ ಡಿವೈಎಫ್ಐ ರಾಜ್ಯ ಸಮಿತಿ ಪದಾಧಿಕಾರಿಗಳಾದ ಸಂತೋಷ ಬಜಾಲ್, ಪೃಥ್ವಿ ಎಂ.ಜಿ, ಯು. ಯರ್ರಿಸ್ವಾಮಿ, ವಿ.ಸ್ವಾಮಿ, ನಾರಾಯಣ ಎಸ್. ಕೆ, ರೇಣುಕಾ ಪಿ.ಕೆ, ಈಡಿಗರ ಮಂಜುನಾಥ, ಎಚ್. ಸ್ವಾಮಿ, ಜ್ಯೋತಿ ಪಿ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X