ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಗೆಲ್ಲಲು 252 ರನ್‌ಗಳ ಗುರಿಯನ್ನು ಪಡೆದಿದ್ದ ರೋಹಿತ್ ಶರ್ಮಾ ಬಳಗವು, 49 ಓವರ್‌ಗಳಲ್ಲಿ ಆರು ವಿಕೆಟ್‌ಗಳನ್ನು ಕಳೆದುಕೊಂಡು ನಿಗದಿತ ಗುರಿ ತಲುಪುವ ಮೂಲಕ 2002, 2013 ರ ನಂತರ 2025ರಲ್ಲಿ ಮೂರನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
