ಬಗರ್‌ ಹುಕುಂ : ವಾರದೊಳಗೆ ಹಕ್ಕುಪತ್ರ ವಿತರಣೆ; ಶಾಸಕ ಬೆಲ್ದಾಳೆ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರ

Date:

Advertisements

ಬೀದರ್ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ವಾರದೊಳಗೆ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಿ ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಸೇರಿದಂತೆ ಅಗತ್ಯ  ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೋತ್ತರ ವೇಳೆ ಬೀದರ್‌ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಬೀದರ್ ದಕ್ಷಿಣ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚನೆ ಮಾಡದಿರುವ ಕುರಿತು ಪ್ರಸ್ತಾಪಿಸಿದರು. ಸಮಿತಿ ರಚನೆ ರಚಿಸಿ ಸಮಸ್ಯೆ ಇತ್ಯರ್ಥಪಡಿಸದ ಕಾರಣ ಬಗರ್ ಹುಕುಂ ಸಾಗುವಳಿದಾರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಸಮಿತಿ ರಚಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆʼ ಎಂದು ಸದನದ ಗಮನ ಸೆಳೆದರು.

ಶಾಸಕ ಬೆಲ್ದಾಳೆ ಅವರ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಿಸಿ ʼಕಾರಣಾಂತರಗಳಿಂದ ಬೀದರ್ ಜಿಲ್ಲೆಯಲ್ಲಿ ಈವರೆಗೂ ಬಗರ್ ಹುಕುಂ ಸಮಿತಿ ರಚಿಸಿಲ್ಲ. ವಿಳಂಬವಾಗಿರುವ ಬಗ್ಗೆ ಶಾಸಕರು ಹೇಳಿದ್ದನ್ನು ನಾನು ಒಪ್ಪುವೆ. ವಿಳಂಬಕ್ಕೆ ಕಾರಣ ಏನೆಂಬುದು ಸಬೂಬು ಹೇಳಲು ಹೋಗುವುದಿಲ್ಲ. ಸಮಿತಿ ರಚಿಸಿ ಮುಂದಿನ ಪ್ರಕ್ರಿಯೆಗಳು ನಡೆಸುವುದು ಸರ್ಕಾರದ ಕರ್ತವ್ಯʼ ಎಂದು ತಿಳಿಸಿದರು.

Advertisements

ʼಮುಂದಿನ ಒಂದು ವಾರದೊಳಗೆ ಬೀದರ್ ದಕ್ಷಿಣ ಸೇರಿದಂತೆ ಜಿಲ್ಲೆಯ ಎಲ್ಲ ಆರು ಕ್ಷೇತ್ರಗಳಲ್ಲಿ ಸಮಿತಿ ರಚನೆಯಾಗಲಿವೆ. ಅರ್ಹ ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರ ನಿಯಮಾನುಸಾರ ಹಕ್ಕು ಪತ್ರ ನೀಡಲಿದೆ. ಯಾರಿಗೂ ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ವಿನಾಕಾರಣ ಆತಂಕ ಪಡುವ ಅಗತ್ಯವಿಲ್ಲʼ ಎಂದು ಅಭಯ ನೀಡಿದರು.

ʼ2004ರಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರು ಬೆಳೆದ ಬೆಳೆ ಕಟಾವಿನ ವೇಳೆ ಅಧಿಕಾರಿಗಳು ಬೆಳೆ ನಾಶಪಡಿಸಿ ಒಕ್ಕಲೆಬ್ಬಿಸುವುದು ಇಡೀ ರಾಜ್ಯಾದ್ಯಂತ ನಡೆಯುತ್ತಿದೆ. ಇದು ತುಂಬಾ ಗಂಭೀರ ಸಮಸ್ಯೆ. ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡಲೇಬೇಕಾಗಿದೆ. ಸರ್ಕಾರ ದಲಿತರ, ಬಡವರ, ಕೃಷಿಕರ, ಕೂಲಿಕಾರ್ಮಿಕರ, ಹಿಂದುಳಿದವರ ಹಿತ ಕಾಪಾಡಲು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅರ್ಹ ಉಳುಮೆದಾರರಿಗೆ ಹಕ್ಕುಪತ್ರ ನೀಡಿ, ಖಾತೆ, ಪಹಣಿ, ನೋಂದಣಿ ಮಾಡಿಕೊಡಬೇಕುʼ ಎಂದು ಶಾಸಕ ಬೆಲ್ದಾಳೆ ಗಮನ ಸೆಳೆದರು.

ʼರಾಜ್ಯದ ಬೇರೆಡೆ ಬಗರ್ ಹುಕುಂ ಸಕ್ರಮೀಕರಣ ಸಮಿತಿಗಳನ್ನು ರಚಿಸಿ ವರ್ಷವೇ ಉರುಳಿದೆ. ಆದರೆ ಬೀದರ್ ಜಿಲ್ಲೆಯಲ್ಲಿ ಸಮಿತಿಗಳನ್ನು ರಚನೆ ಏಕೆ ಮಾಡಿಲ್ಲ? ನಮ್ಮವರ ಮೇಲೇಕೆ ಹೀಗೆ  ಅನ್ಯಾಯ? ನಮ್ಮ ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದಾರೆ ಎಂಬ ಕಾರಣಕ್ಕೆ ಸರ್ಕಾರ ತಾರತಮ್ಯ ಮಾಡುತ್ತಿದೆಯೇʼ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಪ್ರಶ್ನಿಸಿದರು.

ʼಒಂದು ವಾರದೊಳಗೆ ಹಕ್ಕುಪತ್ರ ನೀಡಿ ನೋಂದಣಿ ಮಾಡಿಕೊಡುವುದಾಗಿ ಕಂದಾಯ ಸಚಿವರು ಕಳೆದ ಅಕ್ಟೋಬರ್‌ನಲ್ಲಿ ಘೋಷಣೆ ಮಾಡಿದ್ದರು. ಈ ಹೇಳಿಕೆ ನೀಡಿ ಆರು ತಿಂಗಳಾದರೂ ನಮ್ಮಲ್ಲಿ ಸಮಿತಿಯೇ ರಚನೆಯಾಗಿಲ್ಲ. ಸಾಗುವಳಿದಾರರು ಆತಂಕದಲ್ಲಿ ಅಲೆದಾಡುವಂತಾಗಿದೆ. ಬೀದರ್‌ನಲ್ಲಿ ಕಳೆದ 12 ವರ್ಷಗಳಿಂದ ಸಮಿತಿ ಸಭೆಯೇ ನಡೆದಿಲ್ಲ. ಹೀಗಾದರೆ ಇವರ ಸಮಸ್ಯೆ ನಿವಾರಣೆ ಆಗುವುದು ಯಾವಾಗ? ಇನ್ನು ಬಗರ್ ಹುಕುಂ ಸಾಗುವಳಿ ಹೆಸರಿನಲ್ಲಿ ಕೆಲವೆಡೆ ಭೂ ಮಾಫಿಯಾದವರು ಜಾಗ ಕಬಳಿಕೆ ಯತ್ನಿಸುತ್ತಿದ್ದಾರೆ ಎಂಬ ದೂರುಗಳು ಸಹ ಬರುತ್ತಿವೆ. ಸರ್ಕಾರ ಇದಕ್ಕಾಗಿ ಕಾಲಮಿತಿ ಕಾರ್ಯಯೋಜನೆ ಹಾಕಿಕೊಂಡು ಬಡ ಸಾಗುವಳಿದಾರರ ನೆರವಿಗೆ ಬರಬೇಕುʼ ಎಂದು ಕೋರಿದರು.

ʼಬೀದರ್ ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ ಎಲ್ಲ ಆರು ಕ್ಷೇತ್ರಗಳಲ್ಲಿ ಸಮಿತಿ ರಚನೆ ಮಾಡಿಲ್ಲ ಎಂದಾದರೆ ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರಣನಾʼ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಖಾರವಾಗಿ ಪ್ರಶ್ನಿಸಿದರು. ಮಹತ್ವದ ವಿಷಯದ ಬಗ್ಗೆ ಸರ್ಕಾರ ಗಮನಹರಿಸಬೇಕು. ಶಾಸಕ ಬೆಲ್ದಾಳೆ ಅವರ ಜನಪರ ವಿಷಯದ ಬೇಡಿಕೆಗೆ ಸರ್ಕಾರ ಸ್ಪಂದಿಸಿ ಶೀಘ್ರದಲ್ಲಿ ಬೀದರ್ ಜಿಲ್ಲೆಯಲ್ಲಿ ಸಮಿತಿ ರಚಿಸಿ ಗೊಂದಲ ನಿವಾರಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯ ಕೊಂದು ಆತ್ಮಹತ್ಯೆಗೆ ಶರಣಾದ ನವವಿವಾಹಿತ

ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶಾಸಕ ಬೆಲ್ದಾಳೆ ಅವರ ಬೇಡಿಕೆಗೆ ಧ್ವನಿಗೂಡಿಸಿ, ʼಸರ್ಕಾರ ವಿಳಂಬ ಮಾಡದೆ ಸಮಿತಿ ರಚಿಸಿ ಅರ್ಹರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ವಾರದಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸಚಿವ ಬೈರೇಗೌಡ ಅವರು ತಿಳಿಸಿ ಚರ್ಚೆಗೆ ತೆರೆ ಎಳೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X