ಪೊಲೀಸ್‌ ಸಿಬ್ಬಂದಿ ಸ್ವಂತ ವಾಹನಗಳ ಮೇಲೆ ‘ಪೊಲೀಸ್’​ ಎಂದು ಬರೆಸುವಂತಿಲ್ಲ: ಪರಮೇಶ್ವರ್

Date:

Advertisements

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ‘ಪೊಲೀಸ್‌‘ (POLICE) ಎಂದು ಬರೆಸುವಂತಿಲ್ಲ. ಒಂದು ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಶ್ರವಣಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದರು. ಇದಕ್ಕೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

“ರಾಜ್ಯದ ಪೊಲೀಸ್‌ ಇಲಾಖೆಯ ಅಧಿಕಾರಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ”ಎಂದು ಪರಮೇಶ್ವರ್‌ ಹೇಳಿದರು.

Advertisements

ಶಾಸಕ ಬಾಲಕೃಷ್ಣ ಮಧ್ಯ ಪ್ರವೇಶಿಸಿ, ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಕೆಲ ಪೊಲೀಸ್ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗಳೇನು? ಎಂದು ಪ್ರಶ್ನಿಸಿದರು.

ಉತ್ತರ ನೀಡಿದ ಪರಮೇಶ್ವರ್, “ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೆ ಅವರ ವಿರುದ್ಧ 2022ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ” ಎಂದಷ್ಟೇ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X