ಬೆಂಗಳೂರಿಗೆ ವಕ್ಕರಿಸಿದ ಘಜ್ನಿ- ಘೋರಿ; ಲೂಟಿಗಾಗಿ ಬಿಬಿಎಂಪಿ ಏಳು ಭಾಗ: ಕುಮಾರಸ್ವಾಮಿ ಆಕ್ರೋಶ

Date:

Advertisements

ಕಾಂಗ್ರೆಸ್ ಸರಕಾರ ಬಿಬಿಎಂಪಿಯನ್ನು ಏಳು ಭಾಗ ಮಾಡಲು ಹೊರೆಟಿದೆ. ಸಂಪದ್ಭರಿತ ಬೆಂಗಳೂರು ನಗರವನ್ನು ಲೂಟಿ ಮಾಡಲು ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಅವನು ನಗರದ ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಸೋಮವಾರ ಅಂಗೀಕರಗೊಂಡಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಬಿಬಿಎಂಪಿಯನ್ನು ಛಿದ್ರ ಮಾಡಲು ಹೊರಟಿದೆ ಸರಕಾರ. ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ. 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ” ಎಂದು ಟೀಕಿಸಿದ್ದಾರೆ.

Advertisements

“ಕಾಂಗ್ರೆಸ್ ನೀತಿಯೇ Divide and Rule (ಒಡೆದು ಅಳುವುದು). ಅಂದು ಅಖಂಡ ಭಾರತವನ್ನು ಹೋಳು ಮಾಡಿತು! ಇಂದು ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದೇ ಕಾಂಗ್ರೆಸ್ ಸರಕಾರದ ದುರಿದ್ದೇಶವಾಗಿದೆ. ಇವರಿಗೆ ಗ್ರೇಟರ್‌ ಬೆಂಗಳೂರು ಎನ್ನುವುದು ಹೆಸರಿಗಷ್ಟೇ. ಲೂಟರ್‌ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ ಎಂದಿರುವ ಅವರು ಲೂಟರ್ ಯಾರು ಎಂಬುದನ್ನು ಹೇಳಿಲ್ಲ, ಅದಕ್ಕೆ ಅವರು ಯಾರ ಹೆಸರನ್ನೂ ತೆಗೆದುಕೊಂಡಿಲ್ಲ” ಎಂದಿದ್ದಾರೆ.

“ಬಿಬಿಎಂಪಿ ವಿಭಜನೆ ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ. ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್‌ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ. ಅಲ್ಲದೆ, ಏಳು ಪಾಲಿಕೆ ಹಾಳು ಪಾಲಿಕೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X