ಬೇಲಿ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಬಿಟ್ಟು ಹೋಗಿರುವ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಮಾಟನಹಳ್ಳಿ ಬಳಿ ನಡೆದಿದೆ.
ದುಷ್ಕರ್ಮಿಗಳು ಶಿಶುವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ, ಪೊದೆಯ ಬಳಿ ಎಸೆದಿದ್ದಾರೆ. ಮಗುವಿನ ಅಳುವ ಶಬ್ಧ ಕೇಳಿಸಿಕೊಂಡ ಕೆಲ ಕುರಿಗಾಹಿಗಳು ಸ್ಥಳೀಯರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ಥಳೀಯ ಮಹಿಳೆಯರು ಶಿಶುವಿನ ಆರೈಕೆ ಮಾಡಿದ್ದಾರೆ. ಬಳಿಕ ಕಳ್ಳಂಬೆಳ್ಳ ಠಾಣೆ ಪೊಲೀಸರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ: ಹಾಸನ | ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ; ಮಾ.15ರಿಂದ ಏಕಮುಖ ಸಂಚಾರ
ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಿದೆ.
