ಹವಾಮಾನ | ಬೆಂಗಳೂರಿನಲ್ಲಿ ದಿಢೀರ್ ತುಂತುರು ಮಳೆ, ಬಿರು ಬಿಸಿಲಿನಿಂದ ಬಳಲಿದ್ದ ನೆಲಕ್ಕೆ ತಂಪು

Date:

Advertisements

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಹಲವೆಡೆ ದಿಢೀರ್ ತುಂತುರು​ ಮಳೆಯಾಗಿದ್ದು, ಬೇಸಿಗೆಯ ಬಿರು ಬಿಸಿಲಿನಿಂದ ಬಳಲಿದ್ದ ನೆಲ ತಂಪಾಗಿದೆ.

ಬೇಸಿಗೆ ಕಾಲ ಆರಂಭದ ಬಳಿಕ ಇದು ಮೊದಲ ಮಳೆ ಎಂಬುದು ವಿಶೇಷ. ಇತ್ತ ಮಳೆಯಿಂದ ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಒಂದಿಷ್ಟು ತಂಪಾದ ವಾತಾವರಣದ ಅನುಭವ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೂ ತಾಪಮಾನ ಹೆಚ್ಚಿತ್ತು. ಮಧ್ಯಾಹ್ನದ ವೇಳೆಗೆ ತಾಪಮಾನ ಮತ್ತಷ್ಟು ಏರಿಕೆಯಾಗಿತ್ತು. ಆದರೆ, ಸಂಜೆ 6 ಗಂಟೆಗೆ ಏಕಾಏಕಿ ಹಲವು ಪ್ರದೇಶಗಳಲ್ಲಿ ದಿಢೀರ್‌ ಮಳೆ ಹನಿ ಸುರಿಯಿತು. ಇನ್ನು ಒಂದೆರಡು ತಿಂಗಳಿಂದ ಕಾಣೆಯಾಗಿದ್ದ ಮಳೆಯನ್ನು ಒಮ್ಮೆ ಕಂಡು ಬೆಂಗಳೂರಿನ ಜನ ಅಚ್ಚರಿಗೊಳಗಾದರು.

Advertisements

ಕರ್ನಾಟಕದಲ್ಲಿ ತಾಪಮಾನ ಏರಿಕೆ ನಡುವೆಯೇ ಹವಾಮಾನ ಇಲಾಖೆಯ ಮಳೆಯ ಮುನ್ಸೂಚನೆ ನೀಡಿತ್ತು. ರಾಜ್ಯದ ಹಲವು ಭಾಗಗಳಲ್ಲಿ ಮಾರ್ಚ್‌ 14ರವರೆಗೆ ಸುಡುವ ಬೇಸಿಗೆಯಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ಹವಾಮಾನ ಇಲಾಖೆ ನೀಡಿದ್ದ ಮುನ್ಸೂನೆ ನಿಜವಾಗಿದ್ದು, ಬೆಂಗಳೂರಿನಲ್ಲಿ ವಿವಿಧ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದ ಜನರು ಸಂತಷಗೊಂಡಿದ್ದಾರೆ.

ಎಲ್ಲೆಲ್ಲಿ ಮಳೆ?

ಪ್ರಮುಖವಾಗಿ ಬೆಂಗಳೂರು ಕೇಂದ್ರ ಭಾಗವಾದ ಮೆಜೆಸ್ಟಿಕ್‌, ಗಾಂಧಿನಗರ, ಶಿವಾಜಿನಗರ, ಎಂಜಿ ರಸ್ತೆ, ಕಬ್ಬನ್‌ ಪಾರ್ಕ್‌, ಇಂದಿರಾನಗರ, ಹಲಸೂರು, ಬನಶಂಕರಿ, ಬಸವನಗುಡಿ, ಚಾಮರಾಜಪೇಟೆ, ಯಶವಂತಪುರ, ರಾಜಾಜಿ ನಗರ, ವಿಜಯ ನಗರ. ಹೊರ ವಲಯಗಳಾದ ಕೆಆರ್‌ ಪುರಂ, ಕನಕಪುರ ರಸ್ತೆ, ಮೈಸೂರು ರಸ್ತೆ ಸುತ್ತಮುತ್ತ ಬಡಾವಣೆಗಳಲ್ಲಿ ತುಸು ಮಳೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X