ಬೆಂಗಳೂರು | ದೇವನೂರ ಮಹಾದೇವರ ಪಾಠ ಸೇರಿಸಲು ಎಸ್‌ಎಫ್‌ಐ ಆಗ್ರಹ

Date:

Advertisements

ಸಾಹಿತಿ ದೇವನೂರ ಮಹಾದೇವ ಅವರ ʼಎದೆಗೆ ಬಿದ್ದ ಅಕ್ಷರʼ ಪಾಠವನ್ನು ಪಠ್ಯಪುಸ್ತಕಕ್ಕೆ ಸೇರಿಸಬೇಕು ಎಂದು ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ) ಆಗ್ರಹಿಸಿದೆ.

“ರಾಜ್ಯ ಸರ್ಕಾರ ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ಸಮಿತಿ ರಚಿಸಿರುವುದನ್ನು ಎಸ್‌ಎಫ್‌ಐ ರಾಜ್ಯ ಸಮಿತಿಯು ಸ್ವಾಗತಿಸುತ್ತದೆ” ಎಂದು ತಿಳಿಸಿದೆ.

“ಕಳೆದ ವರ್ಷ ಬಿಜೆಪಿ ಸರ್ಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಕಾಂಗ್ರೆಸ್ ಸರ್ಕಾರ ಮರುಸೇರ್ಪಡೆ ಮಾಡುತ್ತಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರ ಮಹಾದೇವರ ʼಎದೆಗೆ ಬಿದ್ದ ಅಕ್ಷರʼ ಎಂಬ ಪಾಠವು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ತಿದ್ದುಪಡಿ ಅಥವಾ ಸೇರ್ಪಡೆ ಪಟ್ಟಿಯಲ್ಲಿ ಇಲ್ಲದಿರುವುದು ನೋವಿನ ವಿಷಯವಾಗಿದೆ” ಎಂದು ಎಸ್‌ಎಫ್‌ಐ ಬೇಸರ ವ್ಯಕ್ತಪಡಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಅಸಲಿ ಹಿಂದುತ್ವಕ್ಕೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ: ಸಚಿವ ರಾಮಲಿಂಗಾ ರೆಡ್ಡಿ

“ಎದೆಗೆ ಬಿದ್ದ ಅಕ್ಷರ ಪಾಠವು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಹಿಂದೆ ಬಿಜೆಪಿ ಸರ್ಕಾರದ ಕೋಮುವಾದದ ವಿರುದ್ಧ ದೇವನೂರ ಮಹಾದೇವ ಅವರು ಬಹಿರಂಗವಾಗಿ ಪ್ರತಿಭಟನೆ ಮಾಡಿದ್ದರು. ಹಾಗೂ ಎದೆಗೆ ಬಿದ್ದ ಅಕ್ಷರದ ಭಾಗವನ್ನು ಗದ್ಯಭಾಗದಲ್ಲಿ ಪ್ರಕಟಿಸಲು ನೀಡಿದ್ದ ಅನುಮತಿ ಹಿಂಪಡೆದಿದ್ದರು. ಆದರೆ, ಈಗ ಮುಖ್ಯಮಂತ್ರಿ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಇದರ ಬಗ್ಗೆ ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಅವರ ಪಾಠ ಸೇರಿಸಬೇಕು” ಎಂದು ಆಗ್ರಹಿಸಿದೆ.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X