ಬೀದರ್‌ | ವೃದ್ದಾಪ್ಯ ವೇತನ ಬಾರದೆ ವೃದ್ಧ ದಂಪತಿ ಪರದಾಟ; ಕಣ್ಣು ಹಾಯಿಸುವರೇ ಅಧಿಕಾರಿಗಳು?

Date:

Advertisements

ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಕೆಲಸ ಮಾಡಲಾಗದ ವೃದ್ಧರು. ವಯೋವೃದ್ಧ ಪೋಷಕರನ್ನು ನೋಡಿಕೊಳ್ಳಬೇಕಾದ ಮಗ ಬೇರೆ ನಗರದಲ್ಲಿ ವಾಸ. ಸರ್ಕಾರದ ಯೋಜನೆಗಳು ಸಿಗದ ವೃದ್ಧ ದಂಪತಿ ಕುಟುಂಬಕ್ಕೆ ನರಕಯಾತನೆ. ಒಪ್ಪತ್ತಿನ ಊಟಕ್ಕೂ ಪರದಾಟ!

ಇದು ಔರಾದ್‌ ತಾಲ್ಲೂಕಿನ ಶೆಂಬೆಳ್ಳಿ ಗ್ರಾಮದ ವೃದ್ಧ ದಂಪತಿ ಲಾಲಪ್ಪ ಹಾಗೂ ಲಕ್ಷ್ಮೀಬಾಯಿ ಸಿಂಗೆ ಅವರ ಕುಟುಂಬದ ಬದುಕಿನ ಚಿತ್ರಣ. 80 ವರ್ಷದ ಲಾಲಪ್ಪ ಹಾಗೂ 60 ವರ್ಷದ ಲಕ್ಷ್ಮೀಬಾಯಿ ದಂಪತಿ ಸಂಧ್ಯಾ ಸುರಕ್ಷಾ ಯೋಜನೆ ಪಿಂಚಣಿಯಿಂದ ವಂಚಿತರಾಗಿ ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ.

ಲಾಲಪ್ಪ ಅವರು ಕಳೆದ 15ಕ್ಕೂ ಹೆಚ್ಚಿನ ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮನೆಯಿಂದ ಹೊರ ಬಾರದಂತಹ ಪರಿಸ್ಥಿತಿ ಇದೆ. ಇನ್ನು ಅವರ ಪತ್ನಿ ಲಕ್ಷ್ಮೀಬಾಯಿ ಅವರಿಗೆ ದೃಷ್ಟಿದೋಷವಿದೆ. ಕೆಲಸ ಮಾಡಲು ಆಗುತ್ತಿಲ್ಲ. ಆದರೆ ಉಪಜೀವನಕ್ಕೆ ಯಾವುದೇ ಆರ್ಥಿಕ ನೆರವು ಇಲ್ಲದಿರುವುದಕ್ಕೆ ಕೂಲಿ ಕೆಲಸಕ್ಕೆ ಹೋಗವುದು ಅನಿವಾರ್ಯ ಎಂಬಂತಾಗಿದೆ.

Advertisements

ಈ ಹಿಂದೆ ಲಾಲಪ್ಪ ಅವರಿಗೆ ಪಿಂಚಣಿ ಹಣ ಬರುತ್ತಿತ್ತು, ಆಧಾರ್ ಕಾರ್ಡ್ ಹಾಗೂ ತಾಂತ್ರಿಕ ಸಮಸ್ಯೆ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಪಿಂಚಣಿ ಸ್ಥಗಿತವಾಗಿದೆ. ವೃದ್ಧೆ ಲಕ್ಷ್ಮೀಬಾಯಿ ಅವರು ಪಿಂಚಣಿ ಪಡೆಯುವ ಅರ್ಹತೆ ಹೊಂದಿದ್ದಾರೆ. ಆದರೆ ಓಡಾಡಲು ಸಾಧ್ಯವಾಗದಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಇಳಿವಯಸ್ಸಿನ ದಂಪತಿ ತಮ್ಮ ಔಷಧಿ ಖರ್ಚಿಗೂ ಹಣವಿಲ್ಲದೆ ಪರದಾಡುತ್ತಿದ್ದು, ಸಂಧ್ಯಾ ಸುರಕ್ಷಾ ಯೋಜನೆಯ ಪಿಂಚಣಿ ಮಾಸಿಕ ₹1,200 ಬರುವಂತೆ ಮಾಡಿಕೊಡಲು ʼಈದಿನ.ಕಾಮ್‌ʼ ಜೊತೆ ಮಾತನಾಡಿ ಅಳಲು ತೋಡಿಕೊಂಡಿದ್ದಾರೆ.

ʼಸರಕಾರದ ವೃದ್ದಾಪ್ಯ ವೇತನವನ್ನೇ ಅವಲಂಬಿಸಿರುವ ಲಾಲಪ್ಪ ಸಿಂಗೆ ಅವರಿಗೆ ಬರುತ್ತಿದ್ದ ಮಾಸಿಕ ಪಿಂಚಣಿ ತಾಂತ್ರಿಕ ದೋಷದಿಂದ ರದ್ದಾಗಿದ್ದು, ಅದನ್ನು ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳು ಸರಿಪಡಿಸಿ ಪಿಂಚಣಿ ಹಣ ಖಾತೆಗೆ ಜಮಾ ಆಗುವಂತೆ ಕ್ರಮವಹಿಸಬೇಕು. ಹಾಗೂ ಅವರ ಪತ್ನಿ ಲಕ್ಷ್ಮೀಬಾಯಿ ವೃದ್ದಾಪ್ಯ ವೇತನ ಪಡೆಯಲು ಅರ್ಹತೆ ಹೊಂದಿದ್ದು, ಅವರಿಗೂ ಪಿಂಚಣಿ ಮಂಜೂರು ಮಾಡಬೇಕುʼ ಎಂದು ದಸಂಸ ಮುಖಂಡ ಗಣಪತಿ ವಾಸುದೇವ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼರಕ್ತ ವಿಲಾಪʼ ನಾಟಕದಲ್ಲಿ ಮೂಡಿದ ವರ್ತಮಾನದ ತಲ್ಲಣ : ಭೀಮಾಶಂಕರ ಬಿರಾದರ್

ಈ ಕುರಿತು ಔರಾದ್ ತಹಶೀಲ್ದಾರ್‌ ಮಲ್ಲಶೆಟ್ಟಿ ಚಿದ್ರೆ ಅವರಿಗೆ ವಿಚಾರಿದಾಗ, ʼತಾಂತ್ರಿಕ ಸಮಸ್ಯೆಯಿಂದ ಮಾಸಿಕ ಮಸಾಶನ ಬರುವುದು ರದ್ದಾಗಿರಬಹುದು. ಇದನ್ನು ಶೀಘ್ರದಲ್ಲೇ ಬಗೆಹರಿಸಿ ಲಾಲಪ್ಪ ಹಾಗೂ ಲಕ್ಷ್ಮೀಬಾಯಿ ದಂಪತಿಗೆ ಸಂಧ್ಯಾ ಸುರಕ್ಷಾ ಯೋಜನೆ ಹಣ ಬರುವಂತೆ ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸುವೆʼ ಎಂದು ಹೇಳಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X