ಚಾಮರಾಜನಗರ | ಹೊರಗುತ್ತಿಗೆ ನೌಕರರ ನೊಂದಣಿಗಾಗಿ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

Date:

Advertisements

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಂಘ ಸ್ಥಾಪಿಸಲು ಹೊರಗುತ್ತಿಗೆ ಕಾರ್ಮಿಕರ ನೊಂದಣಿಗಾಗಿ ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

” ಬೀದರ್ ಜಿಲ್ಲೆಯಲ್ಲಿ ಹೊರಗುತ್ತಿಗೆ ನೌಕರರ ಶ್ರೇಯೋಭಿವೃದ್ಧಿಗೆ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಂಘವನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸ್ಥಾಪನೆ ಮಾಡಲಾಗಿದೆ. ಹೊರಗುತ್ತಿಗೆ ನೌಕರರಿಗೆ ಅವಶ್ಯ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಸಂಘ ರಚಿಸಲು ಸರ್ಕಾರ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳು, ನಗರ, ಸ್ಥಳೀಯ ಸಂಸ್ಥೆಗಳು, ನಿಗಮ ಮಂಡಳಿಗಳಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ನೌಕರರ ಮಾಹಿತಿಯನ್ನು ಮೂರು ದಿನದೊಳಗೆ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎರಡೂವರೆ ಸಾವಿರದಿಂದ 3 ಸಾವಿರ ಹೊರಗುತ್ತಿಗೆ ನೌಕರರು ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೂ ಆಡಳಿತ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ನಿಗದಿತ ಕಾಲಮಿತಿಯಲ್ಲಿ ಇಎಸ್ಐ ಹಾಗೂ ಪಿಎಫ್ ಹಣ ಪಾವತಿಯಾಗದಿರಬಹುದು. ಅದರಲ್ಲೂ, ಮಹಿಳಾ ನೌಕರರಿಗೆ ಅಧಿಕಾರಿಗಳು, ಇತರರಿಂದ ಕಿರುಕುಳವಾಗಬಹುದು. ಇದನ್ನು ತಪ್ಪಿಸಿ ಹೊರಗುತ್ತಿಗೆ ನೌಕರರಿಗೆ ಜೀವನ ಭದ್ರತೆಯನ್ನು ಒದಗಿಸಲು ಅನುಕೂಲವಾಗುವಂತೆ ಸಂಘ ಸ್ಥಾಪಿಸಬೇಕಿದೆ” ಎಂದರು.

Advertisements

” ಶಿಕ್ಷಣ, ಆರೋಗ್ಯ, ಬ್ಯಾಂಕ್‍ಗಳು, ಕೈಗಾರಿಕೆಗಳು ಹಾಗೂ ಚಾಮುಲ್ ಸೇರಿದಂತೆ ಇತರೆಡೆ ಹೆಚ್ಚಿನ ಹೊರಗುತ್ತಿಗೆ ನೌಕರರಿದ್ದಾರೆ. ನೊಂದಣಿ ಪ್ರಕ್ರಿಯೆಯಲ್ಲಿ ಯಾವುದೇ ಹೊರಗುತ್ತಿಗೆ ನೌಕರರು ವಂಚಿತರಾಗದಂತೆ ವ್ಯವಸ್ಥಿತ ನೊಂದಣಿ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು. ಸರ್ಕಾರಿ ಕೆಲಸ ಸಿಗದ ನಿರುದ್ಯೋಗಿಗಳಿಂದ ಹೊರಗುತ್ತಿಗೆ ಸೇವೆಗೂ ಸಾಕಷ್ಟು ಬೇಡಿಕೆ ಇದ್ದು, ಸರ್ಕಾರದ ಪ್ರತಿನಿಧಿಗಳಾಗಿ ಕೆಲಸ ಮಾಡುವ ನಾವೆಲ್ಲರೂ ಹೊರಗುತ್ತಿಗೆ ನೌಕರರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನೆರವಾಗಬೇಕಿದೆ ” ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಂಘ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಲಿದ್ದು, ಸಂಘಕ್ಕೆ ವಿವಿಧ ಇಲಾಖೆ ಅಧಿಕಾರಿಗಳನ್ನೊಳಗೊಂಡ ನಿರ್ದೇಶಕ ಮಂಡಳಿಯ ಅಗತ್ಯವಿದೆ. ಹೆಚ್ಚಿನ ಹೊರಗುತ್ತಿಗೆ ನೌಕರರಿರುವ ಇಲಾಖೆಗಳ ಸಿಬ್ಬಂದಿಯನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಲಾಗುವುದು. ಹೊರಗುತ್ತಿಗೆ ನೌಕರರ ಒಟ್ಟಾರೆ ನೊಂದಣಿ ಪ್ರಕ್ರಿಯೆ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿರುವುದರಿಂದ ಕ್ರಮಬದ್ಧ ನೊಂದಣಿಗೆ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ ಎಂ ಸವಿತ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ಮಹೇಶ್, ಸಹಕಾರ ಸಂಘಗಳ ಉಪನಿಬಂಧಕಿ ಜ್ಯೋತಿ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ ವಿ ಸುಧಾ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X