ಚಾಮರಾಜನಗರ | ಕ್ರೀಡೆಯಲ್ಲಿ ಸಾಧನೆಗೈಯ್ಯಲು ಯುವಜನರಿಗೆ ಅವಕಾಶಗಳ ಅಗತ್ಯವಿದೆ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

Date:

Advertisements

ಚಾಮರಾಜನಗರದ ಜಿಲ್ಲಾ ಪೊಲೀಸ್ ಕ್ರೀಡಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ‘ ಕ್ರೀಡೆಯಲ್ಲಿ ಸಾಧನೆಗೈಯ್ಯಲು ಯುವಜನರಿಗೆ ಅವಕಾಶಗಳ ಅಗತ್ಯವಿದೆ ‘ ಎಂದರು.

” ಜಿಲ್ಲೆಯಲ್ಲಿಯೂ ಸಾಕಷ್ಟು ಕ್ರೀಡಾ ಪ್ರತಿಭೆಗಳಿದ್ದಾರೆ. ಕ್ರೀಡೆಗಳು ಯುವಜನರಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮುಂಚೂಣಿಗೆ ಬರಲು ನೆರವಾಗಲಿವೆ. ಮುಖ್ಯವಾಗಿ ಕ್ರೀಡಾಪಟುಗಳಿಗೆ ದೈಹಿಕ ಹಾಗೂ ಮಾನಸಿಕ ಸದೃಢತೆ ಅವಶ್ಯವಾಗಿದೆ. ಕ್ರೀಡೆಯಲ್ಲಿ ಹೆಣ್ಣು ಮಕ್ಕಳಿಗೂ ಸಮಾನಾವಕಾಶ ಕಲ್ಪಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ. ಜಿಲ್ಲೆಯಲ್ಲಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ನಗರದ ಡಾ ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕಾಗಿದೆ. ನುರಿತ ತರಬೇತುದಾರರ ಅಗತ್ಯವಿದೆ. ಒಟ್ಟಿನಲ್ಲಿ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯವಾಗಿದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಎಲ್ಲರಲ್ಲೂ ಬರಬೇಕು ” ಎಂದರು.

ಕಾಡಾ ಅಧ್ಯಕ್ಷ ಪಿ ಮರಿಸ್ವಾಮಿ ಮಾತನಾಡಿ ಮನುಷ್ಯನಿಗೆ ಶಿಕ್ಷಣದಷ್ಟೇ ಕ್ರೀಡೆಯು ಮುಖ್ಯವಾಗಿದೆ. ಇಂದು ಮಹಿಳೆಯರು ಕ್ರೀಡೆಯೂ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನುಗ್ಗುತ್ತಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆಯಾಗಿದೆ. ಹೆಣ್ಣು ಮಕ್ಕಳ ಸಾಧನೆಗೆ ಚೈತ್ರ ಅವರು ಸ್ಪೂರ್ತಿಯಾಗಿದ್ದಾರೆ ” ಎಂದರು.

Advertisements

ನಗರಸಭೆ ಅಧ್ಯಕ್ಷ ಎಸ್ ಸುರೇಶ್ ಮಾತನಾಡಿ ‘ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರಬೇಕು. ಉತ್ತಮ ಸಾಧನೆಗೈಯ್ಯಲು ಇತರರಿಗೂ ಪ್ರೇರಣೆಯಾಗಲಿ ‘ ಎಂದರು.

ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಟಿ ನರಸೀಪುರ ತಾಲೂಕಿನ ಕುರಬೂರಿನ ಚೈತ್ರ ಮಾತನಾಡಿ ” ತಾವು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ನೆರವಾದ ತರಬೇತುದಾರ ಮಂಜುನಾಥ್ ಅವರನ್ನು ಸ್ಮರಿಸಿ, ಮಹಿಳೆಯರು ಕ್ರೀಡೆಯಲ್ಲಿ ಹೆಚ್ಚಾಗಿ ಭಾಗವಹಿಸಬೇಕು. ಸೋಲು ಗೆಲುವು ಪ್ರಮುಖವಾಗಬಾರದು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ ಮುನ್ನೆಡೆಯಬೇಕು. ಆಗಮಾತ್ರ ಸಾಧನೆ ನಮ್ಮನ್ನು ಹಿಂಬಾಲಿಸಲಿದೆ ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಹೊರಗುತ್ತಿಗೆ ನೌಕರರ ನೊಂದಣಿಗಾಗಿ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಕಾರ್ಯಕ್ರಮದಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ , ನಗರಸಭೆ ಉಪಾಧ್ಯಕ್ಷೆ ಮಮತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ ಸುರೇಶ್, ಯುವ ಸ್ಪಂದನ ಅಧಿಕಾರಿ ಶಾಂತರಾಜು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X