ತಂದೆ-ತಾಯಿ, ಹಿರಿಯರನ್ನು ನೋಡಿಕೊಳ್ಳದಿದ್ದರೆ ಆಸ್ತಿಯಲ್ಲಿ ಪಾಲು ಸಿಗಲ್ಲ: ಕಂದಾಯ ಸಚಿವ

Date:

Advertisements

ತಂದೆ-ತಾಯಿ ಹಾಗೂ ಮನೆಯಲ್ಲಿನ ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರ ಅಸ್ತಿಯಲ್ಲಿ ಮಕ್ಕಳಿಗೆ ಪಾಲು ನೀಡದೇ ಇರಲಿ ಅವಕಾಶವಿದೆ. ಹಿರಿಯರು ತಮ್ಮ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ್ದ ವಿಲ್-ದಾನಪತ್ರವನ್ನು ರದ್ದು ಮಾಡಲು ಕೇಂದ್ರ ಸರ್ಕಾರದ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007’ರಲ್ಲಿ ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಕೃಷ್ಣ ಬೈರೇಗೌಡ ಉತ್ತರಿಸಿದರು. ‘ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ಧಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು.

ಈ ವರದಿ ಓದಿದ್ದೀರಾ?: ‘ರಾಜ್ಯಕ್ಕೆ ತೆರಿಗೆ ಪಾಲನ್ನೂ ನೀಡದೆ, ಸೆಸ್-ಸರ್ಚಾರ್ಜ್‌ಗಳನ್ನೂ ಹೆಚ್ಚಿಸಿಕೊಂಡು ನುಂಗುತ್ತಿದೆ ಮೋದಿ ಸರ್ಕಾರ’

Advertisements

“ಕೇಂದ್ರ ಸರ್ಕಾರ 2007 ರಲ್ಲೇ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು” ಎಂದು ತಿಳಿಸಿದರು.

“ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ಧಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X