ಕಲಬುರಗಿ | ಹೊಟ್ಟೆನೋವು, ತಲೆನೋವಿನಿಂದ 33 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Date:

Advertisements

ಹೊಟ್ಟೆನೋವು, ತಲೆನೋವು ಮತ್ತು ವಾಂತಿಯಿಂದಾಗಿ 33 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕೋಡ್ಲಾ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ 33 ವಿದ್ಯಾರ್ಥಿನಿಯರು ಭಾನುವಾರ ರಾತ್ರಿ ಹೊಟ್ಟೆ ನೋವು, ವಾಂತಿಯಿಂದಾಗಿ ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿನಿಯರಲ್ಲಿ ಹೊಟ್ಟೆನೋವು, ತಲೆನೋವು ಕಾಣಿಸಿಕೊಂಡಿದೆ. ಕೆಲ ವಿದ್ಯಾರ್ಥಿನಿಯರಿಗೆ ವಾಂತಿಯಾಗಿದೆ. ಬಳಿಕ ವಾಹನದಲ್ಲಿ ಸೇಡಂ ತಾಲೂಕು ಸರ್ಕಾರಿ ಆಸ್ಪತ್ರೆಗೆ ವಿದ್ಯಾರ್ಥಿನಿಯರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisements

“ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ. ಬಹುತೇಕ ವಿದ್ಯಾರ್ಥಿನಿಯರಲ್ಲಿ ವಾಂತಿ, ತಲೆನೋವು ಮತ್ತು ಹೊಟ್ಟೆನೋವು ಕಾಣಿಸಿಕೊಂಡಿದೆ. ಗಂಭೀರವಾಗಿರುವಂತಹದ್ದೇನೂ ಇಲ್ಲ” ಎಂದು ಆಸ್ಪತ್ರೆಯ ವೈದ್ಯ ಡಾ ನಾಗನಾಥ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಜಂಟಿ‌ ನಿರ್ದೇಶಕಿ ಪಿ.ಶುಭ ಸೋಮವಾರ ಬೆಳಿಗ್ಗೆ ಸೇಡಂನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಶಾಲೆಯ ಪ್ರಾಧ್ಯಾಪಕಿ ಪ್ರಮಿಳಾ ಹಾಗೂ ಪಾಲಕರು ಇದ್ದರು.

ಕಲುಷಿತ ಆಹಾರ ಸೇವನೆ ಶಂಕೆ: ವಸತಿ ನಿಲಯದಲ್ಲಿ 176 ವಿದ್ಯಾರ್ಥಿನಿಯರಿದ್ದಾರೆ. ಅದರಲ್ಲಿ 23 ವಿದ್ಯಾರ್ಥಿನಿಯರಿಗೆ ಮಾತ್ರ ಆರೋಗ್ಯದಲ್ಲಿ ಏರುಪೇರಾಗಿದೆ. ವಿದ್ಯಾರ್ಥಿನಿಯರು ಸೇವಿಸಿದ ನೀರು ಮತ್ತು ಆಹಾರ ಕಲುಷಿತಗೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನೀರು ಉಳಿಸಲು ‘ಸೆಕ್ಷನ್ 144’ ಜಾರಿ

“ಕೆಲವು ದಿನಗಳಿಂದ ಶ್ರೀ ಸಿಮೆಂಟ್ ಕಂಪನಿಯು ರಾಸಾಯನಿಕ ಪದಾರ್ಥ ಹೊರ ಬಿಡುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ತಲೆನೋವು, ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದೆ. ವಿದ್ಯಾರ್ಥಿನಿಯರು ಅಸ್ವಸ್ಥರಾಗಲು ನಿಖರ ಕಾರಣವನ್ನು ಪತ್ತೆ ಮಾಡಬೇಕು” ಎಂದು ಪಾಲಕರು ಆಗ್ರಹಿಸಿದ್ದಾರೆ.

“ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಲಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥರಾಗಲು ನಿಖರ ಕಾರಣ ತಿಳಿದುಬಂದಿಲ್ಲ. ಸೋಮವಾರ ಸಂಜೆಯ ವೇಳೆಗೆ ಕಾರಣ ತಿಳಿಯಬಹುದು” ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ‌ ನಿರ್ದೇಶಕಿ ಪಿ.ಶುಭ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X