ಉಡುಪಿ | ರೇಣುಕಾಚಾರ್ಯರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು – ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

Date:

Advertisements

ರೇಣುಕಾಚಾರ್ಯರ ಜೀವನದ ಮೌಲ್ಯಗಳನ್ನು ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸುತ್ತಮತ್ತಲಿನ ಸಮಾಜವನ್ನು ಸಮೃದ್ದಿಯತ್ತ ಅಥವಾ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಅವರು ಇಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕನ್ನಡ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವರ ಸಂಯುಕ್ತ ಆಶ್ರಯಲ್ಲಿ ನಡೆದ ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡುತ್ತಿದ್ದರು.

ಪ್ರಸ್ತುತ ಸಮಾಜದಲ್ಲಿ ನಾವು ನಮ್ಮಷ್ಟಕ್ಕೆ ಬದುಕದೇ ಪರರ ಒಳಿತಿಗಾಗಿ ಮತ್ತು ಅಭಿವೃದ್ಧಿಗಾಗಿ ಜೀವಿಸುವ ಮನೋಭಾವನೆ ಹೊಂದಿರಬೇಕು ಹಾಗೂ ಜೀವನದಲ್ಲಿ ಬರುವ ಕಷ್ಟಗಳನ್ನು ಎದುರಿಸಬೇಕೆಂದರೆ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಹನ್ನೆರಡನೇ ಶತಮಾನದಲ್ಲಿ ಶರಣರು ಭಕ್ತಿ ಮತ್ತು ಜ್ಞಾನದ ಸಂಪಾದನೆಗಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸಾಗಿ ತಮ್ಮ ವಿಚಾರಗಳ ಮೂಲಕ ಮತ್ತು ವಚನಗಳ ಮೂಲಕ ಜನರಿಗೆ ಜೀವನದ ಸಂದೇಶವನ್ನು ಸಾರುತ್ತಿದ್ದರು ಎಂದರು.

Advertisements

ಯಶಸ್ಸು ಕಾಣಬೇಕಾದರೆ ಮೊದಲು ಮನಸ್ಥಿತಿಯನ್ನು ಬದಲಾಯಿಸಿಕೊಂಡು ನಂತರ ಜ್ಞಾನವನ್ನು ಸಂಪಾದಿಸಿಕೊಂಡರೆ ಮಾತ್ರ ಯಶಸ್ಸು ಕಾಣಲು ಸಾಧ್ಯ. ಶರಣರ ಪುಸ್ತಕಗಳನ್ನು, ವಚನಗಳನ್ನು ಹೆಚ್ಚಾಗಿ ಓದಿಕೊಂಡು ಮನದಟ್ಟು ಮಾಡಿಕೊಂಡರೆ ನಮ್ಮ ಮನಸ್ಥಿತಿಯನ್ನು ಸುಧಾರಣೆಗೊಳಿಸಬಹುದು ಎಂದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ ಯು.ಸಿ, ರೇಣುಕಾಚಾರ್ಯರು ನಡೆದು ಬಂದ ಜೀವನದ ಹಾದಿಯನ್ನು, ಅವರ ವ್ಯಕ್ತಿತ್ವವನ್ನು ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳ ಕುರಿತಾಗಿ ವಿಶೇಷ ಉಪನ್ಯಾಸ ನೀಡಿ, ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ನಿತ್ಯಾನಂದ ವಿ.ಗಾಂವ್ಕರ್ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿದ್ದ ಶರಣರ ಹಾಗೂ ಮಹಾನುಭವರ ಕೊಡುಗೆಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಪ್ರೇರಣೆಯಾಗಿಟ್ಟುಕೊಂಡರೆ ಬದುಕಲ್ಲಿ ಯಶಸ್ಸು ಕಾಣಬಹುದು ಹಾಗೂ ಬದುಕನ್ನು ಕಟ್ಟಿಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ವೀರಶೈವ ಸಮುದಾಯದ ಸದಸ್ಯರು, ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಸರಿತಾ ನಿರೂಪಿಸಿ, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X