ಬೀದರ್‌ ವಿವಿಗೆ ಡಾ.ಅಂಬೇಡ್ಕರ್‌ ಹೆಸರಿಡಿ

Date:

Advertisements

2022ರಲ್ಲಿ ಆರಂಭವಾದ ಬೀದರ್ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಬೇಕೆಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವವಿದ್ಯಾಲಯ ಅನುಷ್ಠಾನ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ರಾಜ್ಯಪಾಲರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ʼಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ (ಕೆ) ಸ್ನಾತ್ತಕೋತ್ತರ ಕೇಂದ್ರಕ್ಕೆ ನೂತನ ವಿಶ್ವವಿದ್ಯಾಲಯ ಎಂದು ಘೋಷಣೆಯಾಗಿದ್ದು, ನಮಗೆ ಸಂತೋಷದ ವಿಷಯ. ಮುಖ್ಯವಾಗಿ ಭಾರತದ ಎಲ್ಲ ವಿಶ್ವವಿದ್ಯಾಲಯಗಳ ಅಧಿನಿಯಮದ ಮೂಲ ಬಾಂಬೆ ವಿಶ್ವವಿದ್ಯಾಲಯವಾಗಿದ್ದು, ಈ ಅಧಿನಿಯಮದ ಕಾನೂನು ರೂಪಿಸಿದ್ದು ಡಾ.ಅಂಬೇಡ್ಕರ್ ಅವರಾಗಿದ್ದಾರೆ. ಹಾಗಾಗಿ ನಮ್ಮ ಜಿಲ್ಲೆಗೆ ಹೊಸದಾಗಿ ಘೋಷಣೆಯಾಗಿರುವ ವಿಶ್ವವಿದ್ಯಾಲಯಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವಿಶ್ವವಿದ್ಯಾಲಯ ಎಂದು ಹೆಸರಿಡುವಂತೆ ಜಿಲ್ಲೆಯ ಪ್ರಗತಿಪರ ಚಿಂತಕರು, ವಿದ್ಯಾರ್ಥಿಗಳ ಬೇಡಿಕೆಯಾಗಿದೆʼ ಎಂದರು.

Advertisements

ಈ ಬೇಡಿಕೆ ಕುರಿತು 2024ರಲ್ಲಿ ಪತ್ರಿಕಾ ಹೇಳಿಕೆ ಮುಖಾಂತರ ಮನವಿ ಸಲ್ಲಿಸಲಾಗಿತ್ತು. ಆದರೆ ಅದನ್ನು ಪರಿಗಣಿಸಲಿಲ್ಲ. ಈ ಅಧಿವೇಶನದಲ್ಲಿ ಬೀದರ್‌ ವಿವಿಗೆ ಅಂಬೇಡ್ಕರ್‌ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಬೇಕೆಂದು ಪ್ರಸ್ತಾಪಿಸಬೇಕು. ಅಧಿವೇಶನ ಮುಗಿಯುವರೆಗೆ ಘೋಷಿಸಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೋಧಗಯಾ ಟೆಂಪಲ್‌ ಕಾಯ್ದೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ಈ ಸಮಿತಿಯ ಪ್ರಮುಖರಾದ ಮುಕೇಶ್ ಚೆಲವಾ, ಭೀಮರಾವ್‌ ಮಾಲಗತ್ತಿ, ಪೃಥ್ವಿರಾಜ ಮುಧೋಳಕರ್‌, ಸಿದ್ದಾರ್ಥ ಭಾವಿದೊಡ್ಡಿ, ಸಿದ್ದಾರ್ಥ ಕೊಗಟುನೋರ, ದೇವರಾಜ ಜಾಧವ, ನಿತೀಶ ಶಿಂಧೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X