ಉಡುಪಿ | ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಪೊಲೀಸರಿಂದ ಗುಂಡೇಟು, ಅರೆಸ್ಟ್

Date:

Advertisements

ಉಡುಪಿ ಜಿಲ್ಲೆಯಲ್ಲಿ ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಸಂಭವಿಸಿದೆ. ‌

ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಮತ್ತು ಅವರ ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಫೈರಿಂಗ್ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಸದ್ಯ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌. ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

Advertisements

ಘಟನೆ ವಿವರ: ಮಣಿಪಾಲ ಠಾಣಾ ಅಪರಾಧ ಕ್ರಮಾಂಕ 35/25 ರಲ್ಲಿ ಆರೋಪಿ ಇಸಾಕ್ ಹಾಗೂ ಇತರರ ಬಂಧನಕ್ಕಾಗಿ ಮಣಿಪಾಲ ಪೊಲೀಸ್ ಠಾಣಾ ಇನ್ಸ್ಪೆಕ್ಟರ್, ಮಲ್ಪೆ ವೃತ್ತ ನಿರೀಕ್ಷಕರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಈ ತಂಡವು ಆರೋಪಿತರ ಜಾಡನ್ನು ಹಿಡಿದು, ಇಂದು ಮಧ್ಯಾಹ್ನ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿ ಇಸಾಕ್ ಸೇರಿದಂತೆ ಒಟ್ಟು ನಾಲ್ಕು ಜನರನ್ನು ದಸ್ತಗಿರಿ ಮಾಡಿದ್ದಾರೆ. ಈ ಎಲ್ಲಾ ನಾಲ್ಕು ಆರೋಪಿಗಳನ್ನು ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಣಿಪಾಲಕ್ಕೆ ಕರೆತರುವಾಗ, ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ, ಸುಮಾರು 7.15ಕ್ಕೆ ಆರೋಪಿ ಇಸಾಕನು ತನಗೆ ತುರ್ತಾಗಿ ವಾಂತಿ ಹಾಗೂ ಮೂತ್ರ ವಿಸರ್ಜನೆ ಮಾಡಲೇಬೇಕೆಂದು ಹಠ ಮಾಡಿ, ಕರೆತರುತ್ತಿದ್ದ ವಾಹನವನ್ನು ನಿಲ್ಲಿಸಿದ್ದು, ಮೂತ್ರ ವಿಸರ್ಜನೆ ನಂತರ ಏಕಾಏಕಿ ಈತನೊಂದಿಗೆ ಇದ್ದ ಉಡುಪಿ ಪೊಲೀಸ್ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯವರನ್ನ ತಳ್ಳಿ ಅವರ ಮೇಲೆ, ಆತನ ಕೈಗೆ ಅಳವಡಿಸಲಾಗಿದ್ದ ಲೀಡಿಂಗ್ ಚೈನ್ ಅನ್ನು ಬಳಸಿ ಬಲವಾಗಿ ಸುತ್ತಿ ದುಡ್ಡಿರುತ್ತಾನೆ, ನಂತರದಲ್ಲಿ ಇಬ್ಬರು ಪೊಲೀಸ್ ಉಪನಿರೀಕ್ಷಕರುಗಳು ಹಿಡಿಯಲು ಪ್ರಯತ್ನಿಸಿದಾಗ ಅವರಿಗೆ ಬಲವಾಗಿ ಒದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಹೀಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಆತನ ಲೀಡಿಂಗ್ ಚೈನ್ ಕರೆ ತರುತ್ತಿದ್ದ ವಾಹನದ ಎದುರಿನ ಗ್ಲಾಸಿಗೆ ಬಡಿದು, ಗ್ಲಾಸ್ ಒಡೆದು ಅಧಿಕಾರಿ ಹಾಗೆ ಸಿಬ್ಬಂದಿಗಳಿಗೆ ಗಾಯಗಳಾಗಿವೆ. ನಂತರದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ದೇವರಾಜ್ ಅವರು ಎಚ್ಚರಿಕೆ ನೀಡಿದ್ದು, ಕೇಳದೇ ಇದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಕೂಡ ಇಸಾಕ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಆರೋಪಿ ಇಸಾಕ್ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡ ಆರೋಪಿ ಇಸಾಕ್ ಹಾಗೂ ಗಾಯಗೊಂಡ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರಸ್ತುತ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X