ಕಲಬುರಗಿ | ಹೋಳಿ ಹಬ್ಬ; ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ

Date:

Advertisements

ಹೋಳಿ ಹಬ್ಬದ ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್‌ ಆದೇಶಿಸಿದ್ದಾರೆ. ಡಿಸಿ ಸೂಚನೆಯಂತೆ ಇಂದು ಅಬಕಾರಿ ಅಧಿಕಾರಿಗಳು ಆಳಂದ ಪಟ್ಟಣದಲ್ಲಿ ಬಾರ್‌ಗಳನ್ನು ಮುಚ್ಚಿಸುವ ಕೆಲಸ ಆರಂಭಿಸಿದ್ದಾರೆ.

ಜಿಲ್ಲೆಯ ಆಳಂದ ಪಟ್ಟಣದಲ್ಲಿ ಅಬಕಾರಿ ಅಧಿಕಾರಿಗಳು ವಿವಿಧ ಬಾರ್ ಗಳಿಗೆ ತೆರಳಿ ಅವುಗಳನ್ನು ಮುಚ್ಚುವ ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರ ನಿರ್ವಹಣೆ ಸುಗಮಗೊಳಿಸುವ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

WhatsApp Image 2025 03 13 at 12.46.34 PM

ಇದನ್ನೂ ಓದಿ: ಕಲಬುರಗಿ | ಸಿಯುಕೆ ಘಟಿಕೋತ್ಸವ; ಅಟ್ರಾಸಿಟಿ ಆರೋಪಿ ಉಪಕುಲಪತಿಯ ಅಭಿನಂದನೆ ತಿರಸ್ಕರಿಸಿದ ಸಂಶೋಧನಾರ್ಥಿ ನಂದಪ್ಪ ಪಿ

Advertisements

ಅಧಿಕೃತ ಮಾಹಿತಿಯ ಪ್ರಕಾರ, ಈ ನಿಷೇಧಾವಧಿಯಲ್ಲಿ ಯಾವುದೇ ರೀತಿಯ ಅಕ್ರಮ ಮದ್ಯ ಮಾರಾಟ ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ಪೊಲೀಸ್ ಮತ್ತು ಅಬಕಾರಿ ಇಲಾಖೆ ತಂಡಗಳು ನಿರಂತರವಾಗಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಈ ನಿರ್ಬಂಧವನ್ನು ಗೌರವಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X