ಸೇನಾಧಿಕಾರಿಯೊಬ್ಬರು ತನ್ನ ಕಿರಿಯ ಸಹೋದ್ಯೋಗಿ (ಕರ್ನಲ್) ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೇನಾಧಿಕಾರಿ ವಿರುದ್ಧ ಮೇಘಾಲಯದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತನ್ನ ಪತ್ನಿಗೆ ಬ್ರಿಗೇಡಿಯರ್ ಶ್ರೇಣಿಯ ಹಿರಿಯ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಅಧಿಕಾರಿಗಳ ಮೆಸ್‌ನಲ್ಲಿ ಭಾನುವಾರ ಕೃತ್ಯ ನಡೆದಿದೆ ಎಂದು ಕರ್ನಲ್‌ವೊಬ್ಬರು ದೂರು ದಾಖಲಿಸಿದ್ದಾರೆ ಎಂದು ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸೈಯಮ್ ತಿಳಿಸಿದ್ದಾರೆ.
ಕರ್ನಲ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಮದನ್‌ರಿತಿಂಗ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 75–2, 79 ಹಾಗೂ 351 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಎಸ್‌ಪಿ ವಿವೇಕ್ ತಿಳಿಸಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು. ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.