ಬೆಂಗಳೂರು | ನೀರು ಹಿಡಿಯುವಾಗ ವಿದ್ಯುತ್ ಶಾಕ್;‌ ಮಹಿಳೆ ಸಾವು

Date:

Advertisements

ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೆ ಆರ್ ಮಾರುಕಟ್ಟೆ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಸೆಲ್ವಿ ಮೃತ ದುರ್ದೈವಿ.

ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದ್ದು, ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಇಂದು ಬೆಳಗ್ಗೆ 5:30ರ ಸುಮಾರಿಗೆ ಘಟನೆ ಸಂಭವಿಸಿದೆ.

ಮಹಿಳೆ ಸಾವಿಗೆ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ. ಪರಿಣಾಮ ಮಾರ್ಕೆಟ್ ರಸ್ತೆಯಲ್ಲಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ನ್ಯಾಯ ಬೇಕು ಎಂದು ಘೋಷಣೆ ಕೂಗಿ, ಜಲಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Advertisements

ಇದನ್ನೂ ಓದಿ: ಬೃಹತ್ ಬೆಂಗಳೂರು ಆಡಳಿತ ಮಸೂದೆಗೆ ಖಂಡನೆ; ಬೆಂಗಳೂರು ನವನಿರ್ಮಾಣ ಪಕ್ಷ ರ‍್ಯಾಲಿಗೆ ಕರೆ

ನಾಲ್ಕೈದು ಜನ ಇದೇ ರೀತಿ ಸಾವನ್ನಪ್ಪಿದ್ದಾರೆ. ಯಾರೂ ನಮ್ಮ ಸಮಸ್ಯೆ ಕೇಳ್ತಿಲ್ಲ. ನಮ್ಮ ಸಮಸ್ಯೆ ಈಡೇರಿಲ್ಲ ಅಂದ್ರೆ, ಸಾವಿಗೆ ನ್ಯಾಯ ಸಿಕ್ಕಿಲ್ಲ ಅಂದ್ರೆ ನಮ್ಮ ಪ್ರತಿಭಟನೆ ಮುಂದುವರೆಯುತ್ತೆ ಎಂದು ಸಂಪೂರ್ಣ ರಸ್ತೆ ಬಂದ್ ಮಾಡಿದ್ದಾರೆ. ಹಲವು ವರ್ಷಗಳಿಂದ ನೀರಿನ ಸಮಸ್ಯೆ ಬಗೆಹರಿದಿಲ್ಲ. ನೀರಿಗಾಗಿ ಪರದಾಡ್ತಿದ್ದೀವಿ. ನೀರು ಕೇಳಿದರೆ ನಮ್ಮ ಮೇಲೆ ಎಫ್‌ಐಆರ್ ಹಾಕ್ತಾರೆ. ನೀರು ಕೊಟ್ಟಿದ್ರೆ ನಾವ್ಯಾಕೆ ಮೋಟರ್ ಹಾಕ್ತಿದ್ವಿ ಎಂದು ಸ್ಥಳೀಯ ಶಾಸಕ ಜಮೀರ್ ವಿರುದ್ಧ ಜನರು ಕಿಡಿಕಾರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X