ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಸೇರಿ 5 ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ ನರಸಿಂಹಲು ಎಂಬುವವರ ಗುಡಿಸಲಿನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಹಾಗೂ ಕಟ್ಟಿ ಹಾಕಿದ್ದ 5 ಕುರಿಗಳು ಸಜೀವ ದಹನವಾಗಿವೆ. ಮನೆಯಲ್ಲಿದ್ದ ಪತಿ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
40 ಸಾವಿರ ನಗದು, 5 ಗ್ರಾಂ ಚಿನ್ನ ಕಿವಿಯೋಲೆ, ಬೆಳ್ಳಿ ಕಾಲ್ಗೆಜ್ಜೆ, ದವಸ ಧಾನ್ಯ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ: ರಾಯಚೂರು | ನೀರಿಗಾಗಿ ಹೆದ್ದಾರಿ ತಡೆದು ಪ್ರತಿಭಟನೆ
ಮಾಹಿತಿ ತಿಳಿಯುತ್ತಿದ್ದಂತೆ ಕಂದಾಯ, ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
